ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ಶಿವಾನಿ ಶೆಟ್ಟಿ ಪ್ರಥಮ

ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಉಡುಪಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲೂಕು ಪಂಚಾಯತ್ ಉಡುಪಿ ಈ ಸಂಸ್ಥೆಗಳು ಸಂಯುಕ್ತವಾಗಿ 2023 – 2024ರ ಸಾಲಿನ ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆಯೋಜಿಸಿದೆ. 10 ರಿಂದ 17ರ ವಯೋಮಿತಿ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ’ ಶಿವಾನಿ ಶೆಟ್ಟಿ’ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಇದರ ವಿದ್ಯಾರ್ಥಿನಿ ಪ್ರಥಮ ಸ್ಥಾನ ಹಾಗೂ ಕಲಾತ್ಮಕ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಯೋಗಾಸನ ಸ್ಪರ್ಧೆಯಲ್ಲಿ “ಭಾರ್ಗವಿ ಜಿ ಆಚಾರ್ಯ” ಸರಕಾರಿ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಇವರು ದ್ವಿತೀಯ ಸ್ಥಾನ ಪಡೆದರೆ ಕಶಿಕಾ ಆರ್ ಶೆಟ್ಟಿ ಮಾಧವ ಕೃಪಾ ಆಂಗ್ಲಮಾಧ್ಯಮ ಶಾಲೆ ಮಣಿಪಾಲ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.

 
 
 
 
 
 
 
 
 
 
 

Leave a Reply