ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಸೂರಜ್ ಕುಮಾರ್ ಗೆ ಚಿನ್ನದ ಪದಕ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಸೂರಜ್ ಕುಮಾರ್ ಇವರು ಜುಲೈ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಟೇಕ್ವಾಂಡೋ ಚಾಂಪಿಯನ್ ಶಿಪ್ 2022 ವಿಫಾ ಕಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ. ಕಾಲೇಜಿನ ಪ್ರಾಚಾರ್ಯರಾದ ಡಾ.ಮಧುಸೂದನ್ ಭಟ್ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಗಣೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply