ಯೋಗ ಸಾಧಕಿ ತನುಶ್ರೀ ಪಿತ್ರೋಡಿಯ 8 ನೇ ವಿಶ್ವದಾಖಲೆ

ಉಡುಪಿ,(ಎ 5): ಮಂಗಳವಾರ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಯೋಗಾ ಸಾಧಕಿ ತನುಶ್ರೀ ಪಿತ್ರೋಡಿ ಅವರು ನಾಟ್ಯಶಾಸ್ತ್ರದಲ್ಲಿ 108 ಕರಣಗಳ ಭಂಗಿಗಳನ್ನು 3 ನಿಮಿಷ 29 ಸೆಕೆಂಡ್ ನಲ್ಲಿ ಪ್ರಸ್ತುತಪಡಿಸಿ ನಾಟ್ಯ ಶಾಸ್ತ್ರದಲ್ಲಿ 8ನೇ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಕಾಲು ಕೈಗಳ ಚಲನೆ ದೇಹದ ಭಂಗಿ ಇವುಗಳ ಸಂಯೋಜನೆ 108 ಕರಣಗಳಾಗಿವೆ. ಪ್ರತೀ ಕರಣವನ್ನು ಚಲನೆಯಂತೆ ಅಭ್ಯಾಸ ಮಾಡಲಾಗಿದೆ. ಇದು ಕೇವಲ ಭಂಗಿಯಲ್ಲ 108 ನಾಟ್ಯಶಾಸ್ತ್ರದಲ್ಲಿ ಇದನ್ನು ಕ್ರೋಢಿಕರಿಸಲಾಗಿದೆ ಎಂದು ತನುಶ್ರೀ ಅವರ ಗುರು ಶ್ರೀರಾಮಕೃಷ್ಣ ಕೊಡಂಚ ತಿಳಿಸಿದರು.

ಈ ಮೂಲಕ ಸೈಂಟ್ ಸಿಸಿಲಿ ಪ್ರೌಢಶಾಲೆಯ ವಿದ್ಯಾರ್ಥಿನಿ ತನುಶ್ರೀ ಪಿತ್ರೋಡಿ ಅವರು 8ನೇ ವಿಶ್ವ ದಾಖಲೆಯನ್ನು ಮುಡಿಗೇರಿಸಿ ಕೊಂಡಿದ್ದು, ಒಂದು ಗಿನ್ನೆಸ್ ರೆಕಾರ್ಡ್, 7 ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತಮ್ಮ ಸಾಧನೆಯನ್ನು ಮಾಡಿದ್ದಾರೆ. ಇವರಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಗೌರವ ಮಿತ್ತಲ್ ರವರು ದಾಖಲೆ ಪ್ರಮಾಣ ಪತ್ರವನ್ನು ನೀಡಿದರು.

 
 
 
 
 
 
 
 
 
 
 

Leave a Reply