ವಿದ್ಯಾ ಸರಸ್ವತಿಯವರಿಗೆ ಡಾಕ್ಟರೇಟ್ ಪದವಿ ಪ್ರಾಪ್ತಿ

ಇಂಡಿಯನ್ ಎಂಪೈರ್ ಯೂನಿವರ್ಸಿಟಿ ಹಾಗೂ ಯುನಿವರ್ಸಲ್ ಡೆವಲಪ್ಮೆಂಟ್ ಕೌನ್ಸಿಲ್ (A Unit of Peace of World (178/2017 & 1/2021)  Regd. Under NITI AAYOG Govt of India TN/2019/0242661) ನಿಂದ ಮಾಡೆಲಿಂಗ್ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಉಡುಪಿಯ ಶ್ರೀಮತಿ ವಿದ್ಯಾ ಸರಸ್ವತಿಯವರು ಪಡೆದಿರುತ್ತಾರೆ.
ಈ ಡಾಕ್ಟರೇಟ್ ಪದವಿ ಪ್ರಧಾನ ಕಾರ್ಯಕ್ರಮವು ದಿನಾಂಕ 26/06/2022ರಂದು ಬೆಂಗಳೂರಿನ ಭಾರತ್ ಸ್ಕೌಟ್ ಎಂಡ್ ಗೈಡ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿರುವ ಸುಮಾರು ಹದಿನೈದು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟಿಯಾದ ಶ್ರೀಮತಿ ಪ್ರಿಯಾಂಕ ಉಪೇಂದ್ರರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

Leave a Reply