ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸಂಸ್ಥೆ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಭಾಗಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ರಕ್ಷಿತ್ ಆರ್. ಭಟ್ ಭಕ್ತಿಗೀತೆಯಲ್ಲಿ ಪ್ರಥಮ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರಾಪ್ತಿ ಪ್ರದೀಪ್ ಚಿತ್ರಕಲೆಯಲ್ಲಿ ಪ್ರಥಮ ಬಹುಮಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರು ವಿಭಾಗ ಮಟ್ಟದ ಈ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹೆಚ್.ಕೆ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಹಾಸನದ ಪದವಿ ಪೂರ್ವ ಶಿಕ್ಷಣ ಇಲಾಖೆಗಳಿಂದ ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಕಾಲೇಜು ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿವೃಂದ ಅಭಿನಂದಿಸಿದೆ.

 
 
 
 
 
 
 
 
 
 
 

Leave a Reply