ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸoಸ್ಥೆ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿರುತ್ತಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ರಕ್ಷಿತ್ ಆರ್. ಭಟ್ ಭಕ್ತಿಗೀತೆಯಲ್ಲಿ ದ್ವಿತೀಯ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರಾಪ್ತಿ ಪ್ರದೀಪ್ ಚಿತ್ರಕಲೆಯಲ್ಲಿ ತೃತೀಯ ಬಹುಮಾನಗಳಿಸಿದ್ದಾರೆ. ರಾಜ್ಯ ಮಟ್ಟದ ಈ ಸಾಂಸ್ಕೃತಿಕ ಸ್ಪರ್ಧೆಗಳನ್ನು 14 ಡಿಸೆಂಬರ್ 2022ರಂದು ಬೆಂಗಳೂರು ಉತ್ತರ ಜಿಲ್ಲೆಯ ಕೆ.ಎಲ್.ಇ. ಪದವಿ ಪೂರ್ವ ಕಾಲೇಜು, ರಾಜಾಜಿ ನಗರ, ಬೆಂಗಳೂರು ಇಲ್ಲಿ ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳನ್ನು
ಆಡಳಿತ ಮಂಡಳಿ, ಕಾಲೇಜು ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿವೃಂದ ಅಭಿನಂದಿಸಿದೆ.
ವಿದ್ಯೋದಯ ಪದವಿ ಪೂರ್ವ ಕಾಲೇಜು: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಶಸ್ತಿ

- Advertisement -