ಡಾ.ವಿಜಯ ಬಲ್ಲಾಳ್‌ಗೆ ‘ಸಂಸ್ಕೃತಿ ಸಾಧಕ ಪ್ರಶಸ್ತಿ’ ಪ್ರದಾನ

ಉಡುಪಿ: ರಂಗಭೂಮಿ ವತಿಯಿಂದ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ರಂಗಭೂಮಿ ಆನಂದೋತ್ಸವದ ಎರಡನೇ ದಿನ ವಾದ ರವಿವಾರ ತಲ್ಲೂರ್ಸ್‌ ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ‘ಸಂಸ್ಕೃತಿ ಸಾಧಕ ಪ್ರಶಸ್ತಿ’ಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ ಅವರಿಗೆ ಪ್ರದಾನ ಮಾಡಲಾಯಿತು.
ಅಧ್ಯಕ್ಷತೆಯನ್ನು ಮಣಿಪಾಲ ಮಾಹೆಯ ಟೆಕ್ನಾಲಜಿ ಆಯಂಡ್ ಸೈನ್ಸ್ ಸಹ ಉಪಕುಲಪತಿ ಡಾ.ನಾರಾಯಣ ಸಭಾಹಿತ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಕೆ.ರಘುಪತಿ ಭಟ್, ಮಣಿಪಾಲ ಕೆಎಂಸಿಯ ಡೀನ್ ಡಾ.ಪದ್ಮ ರಾಜ ಹೆಗ್ಡೆ, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ, ರಂಗ ನಿರ್ದೇಶಕ ಡಾ.ಶ್ರೀಪಾದ ಭಟ್ ಉಪಸ್ಥಿತರಿದ್ದರುರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿದರು. ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಟ್ರಸ್ಟ್‌ನ ಗಿರಿಜಾ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುತ್ಪಾಡಿ ಸನ್ಮಾನಿತರ ಪರಿಚಯ ಮಾಡಿದರು. ಪೂರ್ಣಿಮಾ ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ನಂತರ ನಟನಾ ಮೈಸೂರು ತಂಡದಿಂದ ಕಣಿವೆಯ ಹಾಡು ನಾಟಕ ಪ್ರದರ್ಶನಗೊಂಡಿತು.

Leave a Reply