Janardhan Kodavoor/ Team KaravaliXpress
29 C
Udupi
Wednesday, December 2, 2020

ಈಗ ಕೆಲ ದಿನಗಳಿಂದ ಸೂರ್ಯಾಸ್ತ ಹಾಗೂ ಸೂರ್ಯೋದಯ ನೋಡಿದಿರಾ..?~ಡಾ.ಎ ಪಿ ಭಟ್,ಉಡುಪಿ.

ಅದೆಂತಹ ಕೆಂಬಣ್ಣ. ಇಡೀ ವರ್ಷದಲ್ಲೇ, ಚೆಂದದ ಸೂರ್ಯೋದಯ ಹಾಗೂ ಸೂರ್ಯಾಸ್ತ. ಸೂರ್ಯಾಸ್ತವಂತೂ ಕೆಂಪೋ ಕೆಂಪು. ನೋಡಲೇ ಬೇಕೆನ್ನುವಷ್ಟು ಬಣ್ಣ .

ಸೂರ್ಯ ಕಣ್ಮರೆಯಾಗುವಾಗ ಇಡೀ ಆಕಾಶವೇ ಕೆಂಬಣ್ಣದ ಓಕುಳಿ. ” ಕೆಂಪಾದವೋ ಎಲ್ಲಾ ಕೆಂಪಾದವೋ “. ಎಲ್ಲರನ್ನೂ ಕೂಗಿ ಕರೆದು, ನೋಡಿ! ನೋಡಿ ! ಎನ್ನುವಷ್ಟು ಚೆಂದ. ಇದು ಆಶ್ವೀಜ ಕಳೆದ ಕಾರ್ತೀಕದ ಆಕಾಶದ ವಿಶೇಷ. ಮಳೆಗಾಲ ಮುಗಿದು, ಹಾಗೆ ಛಳಿ ಪ್ರಾರಂಭದ ನಮ್ಮ ಆಕಾಶದ ವಾತಾವರಣವೇ ಈ ಭವ್ಯತೆಗೆ ಕಾರಣ.

ಹಾಗಾದರೆ, ಈ ತಿಂಗಳು ಮಾತ್ರ ಇಷ್ಟು ಕೆಂಬಣ್ಣವೇ? ಅಂತ ಕೇಳಿದರೆ, ಹೌದು. ಮಳೆಗಾಲದಲ್ಲಿ ಈ ಚೆಂದ, ಇರುವುದೇ ಇಲ್ಲ . ಬರೇ ಬಿಳಿ. ಹಾಗೆಯೆ ಫೆಬ್ರವರಿ, ಮಾರ್ಚ್, ಎಪ್ರಿಲ್, ಮೇ ತಿಂಗಳುಗಳಲ್ಲಿ ಇಷ್ಟು ಕೆಂಬಣ್ಣ ವಿರುವುದಿಲ್ಲ. ಹಳದಿ ಮಿಶ್ರಿತ ಸೌಮ್ಯ ಕೆಂಪು. ಸೆಪ್ಟೆಂಬರ್ ಕಾಲದಲ್ಲಿ ಸೂರ್ಯಾಸ್ತ, ಅರಿಶಿನ ಬಣ್ಣ.

ಇಷ್ಟು ಮಾತ್ರವಲ್ಲ, ಆಶ್ವೀಜ, ಕಾರ್ತೀಕದ ಈ ಹುಣ್ಣಿಮೆಗಳ ಚಂದ್ರನಿಗೆ ಭವ್ಯ ವರ್ತುಲ ವೇರ್ಪಡಬಹುದು. ಹಾಗೂ ಈ ಕಾಲದಲ್ಲೇ ಮಧ್ಯಾಹ್ನದ ಸೂರ್ಯನಿಗೆ ಭವ್ಯ ವರ್ತುಲಾಕಾರದ ಕಾಮನಬಿಲ್ಲಿನ ಕೊಡೆ ಕಾಣಬಹುದು. ಇದೆಲ್ಲದಕ್ಕೂ ನಮ್ಮ ಭೂಮಿಯ ವಾತಾವರಣವೇ ಕಾರಣ. ತೇವ ಮಿಶ್ರಿತ ವಾತಾವರಣದಲ್ಲಿ ಸೂರ್ಯನ ಬೆಳಕು ಚೆದುರಿ, ಈ ಭವ್ಯತೆಯನ್ನು ಮಾಡುತ್ತದೆ.

ಸರ್ ಸಿ ವಿ ರಾಮನ್ ರಿಗೆ ಇದೇ ಬಣ್ಣದೋಕುಳಿಯೇ ಹೊಸ ಹೊಸ ಚಿಂತನೆಗೆ ಕಾರಣವಾಯಿತು. ಅವರ ನೋಬೆಲ್ ಪ್ರಶಸ್ತಿಗೂ ಮೂಲ ಕಾರಣವಾಯಿತು. ಸಮುದ್ರತೀರದಲ್ಲಿ ಹಾಗೂ ಪಶ್ಚಿಮ ಘಟ್ಟದ ಎತ್ತರದ ಪ್ರದೇಶಗಳಲ್ಲಿ , ಈ ಕೆಲದಿನಗಳ ಪ್ರಶಾಂತ ಸಂಜೆ, ಆಕಾಶದ ಹೊಸ ಹೊಸ ಚಿತ್ತಾರಗಳಿಂದ, ಯಾರನ್ನೂ ಮಂತ್ರಮುಗ್ಧರನ್ನಾಗಿಸುತ್ತದೆ.

ರಾತ್ರಿಯ ನೀಲಾಕಾಶದ ನಕ್ಷತ್ರಗಳೂ, ಈಗ ಬಲು ಚೆಂದ. ಈ ಎಲ್ಲಾ ಸೊಬಗು ನಮಗೆ ಮಾತ್ರ. ನಮ್ಮ ಭೂಮಿಯವರಿಗೆ ಮಾತ್ರ. ಬೇರೆ ಯಾವಗ್ರಹಗಳಲ್ಲೂ ವಾತಾವರಣವಿಲ್ಲದೇ ಇರುವುದರಿಂದ , ಈ ಬಣ್ಣದ ಚಿತ್ತಾರ ಇಲ್ಲವೇ ಇಲ್ಲ. ಬೇಕೆಂದಾಗ ಸಿಗದ ಈ ಸೊಬಗನ್ನು ನೋಡಿ ಆನಂದಿಸಬೇಕು.
ಡಾ. ಎ ಪಿ ಭಟ್, ಉಡುಪಿ.

- Advertisement -

ಸಂಬಂಧಿತ ಸುದ್ದಿ

1 COMMENT

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶೀಘ್ರವೇ ನಾಮಕರಣ ಎಂದ ನಳಿನ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ಮತ್ತು ಕನ್ಯಾಡಿ ಶ್ರೀಗಳೊಂದಿಗೆ ಚರ್ಚಿಸಿ "ಕೋಟಿ ಚೆನ್ನಯರ" ಹೆಸರಿಡಲು ನಿಯಮಾವಳಿಗಳ ಅಡಿಯಲ್ಲಿ ಸೂಕ್ತ ಕ್ರಮವನ್ನು ಜರುಗಿಸಲಾಗುವುದು...

ಹತಾಶ ಮಾಜಿ ಮುಖ್ಯಮಂತ್ರಿಗ​ಳಿಂದ ಮುಂದುವರಿದ ಅಪ್ರಬುದ್ಧ ಹೇಳಿಕೆಗಳು​~ ಕ್ಯಾಪ್ಟನ್ ಗಣೇಶ್ ಕಾರ್ಣಿಕ್​. 

ಬೆಂಗಳೂರು: ಲವ್ ಜಿಹಾದ್ ವಿರುದ್ಧ ಕಾನೂನು ತರುವ ಸರಕಾರದ ಪ್ರಯತ್ನದ ವಿರುದ್ಧ ಮಾನ್ಯ​ ಮಾಜಿ ಮುಖ್ಯಮಂತ್ರಿಗಳ ಹೇಳಿಕೆ ಸಂವಿಧಾನ ವಿರೋಧಿ ಮ​ತ್ತು ಪ್ರಜಾಪ್ರಭುತ್ವ ವಿರೋಧಿ ಎಮಾಧ್ಯಮ ವಕ್ತಾರರು ಮತ್ತು ವಿಧಾನಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್...

ಬಾಲಕಿಯರ ಸರಕಾರಿ ಪ ಪೂ ಕಾಲೇಜಿನ ಎರಡು ಅಂತಸ್ತಿನ ನೂತನ ಕಟ್ಟಡವನ್ನು ಉದ್ಘಾಟನೆ 

ನಬಾರ್ಡ್ ಸಹಯೋಗದ ಅರ್ ಐ ಡಿ ಎಪ್ ಯೋಜನೆಯಡಿಯಲ್ಲಿ ರೂಪೈ ಒಂದು ಕೋಟಿ ಎಂಟು ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಪಿ ಬಾಲಕಿಯರ ಸರಕಾರಿ ಪ ಪೂ ಕಾಲೇಜಿನ ಎರಡು ಅಂತಸ್ತಿನ ನೂತನ...

ಸುಗಮ ಚುನಾವಣೆಗೆ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ: ಡಿಸಿ ಜಿ.ಜಗದೀಶ್

ಉಡುಪಿ:  ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಎರಡು ಹಂತದ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು, ಸುಗಮವಾಗಿ ಮತ್ತು ಯಾವುದೇ ಲೋಪಗಳಿಲ್ಲದೇ ನಡೆಸಲು ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯಂತೆ ಕಾರ್ಯ...

ಬೋಟ್ ದುರಂತ: ಕಣ್ಮರೆಯಾಗಿದ್ದ ಎಲ್ಲಾ ಮೀನುಗಾರರ ಮೃತದೇಹ ಪತ್ತೆ

ಮಂಗಳೂರಿನಲ್ಲಿ ಮಂಗಳೂರಿನಲ್ಲಿ ನಡೆದ ಮತ್ತೊಂದು ದೋಣಿ ದುರಂತದಲ್ಲಿ ಮುಳುಗಿದ್ದವರಿಗಾಗಿ ಸತತ ಶೋಧ ಕಾರ್ಯದ ಬಳಿಕ ದುರಂತದಲ್ಲಿ ಮಡಿದ ಎಲ್ಲಾ ಆರು ಮಂದಿ ಮೀನುಗಾರರ ಮೃತದೇಹವನ್ನು ಮುಳುಗುತಜ್ಞರು ಪತ್ತೆ ಹಚ್ಚಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ...
error: Content is protected !!