ಮಾರ್ಚ್,15 ರಂದು ದ.ಕ.,ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

: ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡ ಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ತಿಳಿಸಿದ್ದಾರೆ.

 
 
 
 
 
 
 
 
 

Leave a Reply