Janardhan Kodavoor/ Team KaravaliXpress
25 C
Udupi
Monday, May 17, 2021

ಶ್ರೀಪ್ಲವನಾಮ ಸಂವತ್ಸರದ ಹಾರ್ದಿಕ ಶುಭಾಶಯಗಳುಕೆ.ವಿ.ಲಕ್ಷ್ಮೀನಾರಾಯಣಾಚಾರ್ಯ, ಆನೇಕಲ್.

ಪ್ಲವ ಎಂದರೆ ದೋಣಿ, ಹರಿಗೋಲು (ತೆಪ್ಪ) ಅಥವಾ ಹಡಗು. ಭವ (ಸಂಸಾರ) ಸಾಗರವನ್ನು ದಾಟಿಸುವ ದೇವರನ್ನೂ ಸಹ ಪ್ಲವ ಎಂದು ಕರೆಯಲಾಗುತ್ತದೆ. ಕಳೆದ ವರ್ಷ ಶಾರ್ವರಿ (ಕತ್ತಲು) ಎಂಬ ದೇವತೆಯ ಹೆಸರಿನ ಸಂವತ್ಸರ ಸಾಕಷ್ಟು ಜನರ ಜೀವನದಲ್ಲಿ ಕತ್ತಲು ತುಂಬಿತ್ತು. ಕೊರೋನಾ ಎಂಬ ರೋಗದಿಂದ ಜನರು ಹೈರಾಣಾಗಿದ್ದರು. ಇದೊಂದು ರೀತಿಯ ಭವ ಸಾಗರವೇ ಹೌದು.

ಈ ನೂತನ ವರ್ಷದಲ್ಲಿ ಶ್ರೀಹರಿ ಪ್ಲವ ವೆಂಬ ಸಂವತ್ಸರದ ಹಡಗಿನಲ್ಲಿ ನಮ್ಮನ್ನು ಕೂರಿಸಿ, ಕೊರೋನಾ ಎಂಬ ರೋಗ ಹಾಗೂ ಕಷ್ಟಗಳಿಂದ ಕೂಡಿದ ಸಂಸಾರವೆಂಬ ಭವ ಸಾಗರವನ್ನು ಧಾಟಿಸಿ ದಡ ಸೇರಿಸಲಿ.

ಪ್ಲವನಾಮ ಸಂವತ್ಸರ ಎಲ್ಲರಿಗೂ ಮಂಗಳವನ್ನುಂಟು ಮಾಡಲಿ. ನಮ್ಮ ಜೀವನದಲ್ಲಿ ನರಹರಿಯು ಪ್ಲವ ನಾಗಿ ಆರೋಗ್ಯದ ಜತೆ ಸುಖ, ಸಂತೋಷ ಸಂಪತ್ತನ್ನು ಕರುಣಿಸಲಿ. ಈ ಸಂವತ್ಸರದಲಿ ಉತ್ತಮ ಮಳೆಯಾಗಿ ಇಳೆ ತಣಿದು ಸಸ್ಯ ಶ್ಯಾಮಲೆಯಾಗಲಿ. ಗೋ ಸಂಪತ್ತು ಹೆಚ್ಚಲಿ, ಚಂದನ ಅಗರು ವೃದ್ಧಿಸಲಿ. ಪಾಂಡಿತ್ಯ ಪ್ರವರ್ಧ ಮಾನಕ್ಕೆ ಬರಲಿ. ಕಷ್ಟ ನಷ್ಟದಲ್ಲಿರುವ ಜನರ ಅನಿಷ್ಟ ನಿವಾರಣೆಯಾಗಲಿ. ರೋಗ ರುಜಿನ ತೊಲಗಲಿ, ಸರ್ವರೂ ಆರೋಗ್ಯವಂತರಾಗಲಿ. ನಿರ್ದೋಷನಾದ ಶ್ರೀಹರಿ ಸಕಲ ಜನರಲ್ಲಿನ ದೋಷ ನಿರ್ದೋಷಗೊಳಿಸಲಿ.

ಯುಗಾದಿ
ಪುರಾಣದ ಪ್ರಕಾರ ಬ್ರಹ್ಮದೇವರು ಮೊದಲನೇ ಯುಗವಾದ ಕೃತ ಯುಗವನ್ನು ಆರಂಭಿಸಿದ ದಿನ. ಹಾಗಾಗಿ ಈ ಯುಗಾದಿ ದಿನದಿಂದಲೇ ಚಾಂದ್ರಮಾನ ಪದ್ಧತಿಯ ಕಾಲಗಣನೆ ಆರಂಭವಾಗುತ್ತದೆ.

ಚಂದ್ರ ಭೂಮಿಯ ಸುತ್ತ ಸುತ್ತುವ ವೇಗದ ಗತಿಯನ್ನು ಆಧರಿಸಿ ಚಾಂದ್ರಮಾನ ಪದ್ಧತಿಯನ್ನು ರೂಪಿಸಲಾಗಿದೆ. ಚಾಂದ್ರಮಾನ ಪದ್ಧತಿಯ ಪ್ರಕಾರ ಒಂದು ವರ್ಷದಲ್ಲಿ ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ , ಶ್ರಾವಣ, ಭಾದ್ರ ಪದ, ಆಶ್ವಯುಜ, ಕಾರ್ತಿಕ, ಮಾರ್ಗಶಿರ, ಪುಷ್ಯ, ಮಾಘ ಹಾಗೂ ಫಾಲ್ಗುಣ ಎಂಬ 12 ಮಾಸ (ತಿಂಗಳು) ಗಳು.

ಪ್ರತಿ ತಿಂಗಳು ತಲಾ 15 ದಿನಗಳಂತೆ ಅಮಾವಾಸ್ಯೆಯಿಂದ ಹುಣ್ಣಿಮೆವರೆಗೆ ಶುಕ್ಲ ಹಾಗೂ ಹುಣ್ಣಿಮೆಯಿಂದ ಅಮಾವಾಸ್ಯೆಯವರೆಗೆ ಕೃಷ್ಣ ಎಂಬ ಎರಡು ಪಕ್ಷಗಳು. ಈ ಪಕ್ಷಗಳಲ್ಲಿ ಪಾಡ್ಯ, ಬಿದಿಗೆ, ತದಿಗೆ, ಚೌತಿ, ಪಂಚಮಿ, ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಚತುರ್ದಶಿಯ ನಂತರ ಶುಕ್ಲ ಪಕ್ಷದಲ್ಲಿ 15ನೇ ದಿನ ಹುಣ್ಣಿಮೆ ಮತ್ತು ಕೃಷ್ಣಪಕ್ಷದ 15ನೇ ದಿನ ಅಮಾವಾಸ್ಯೆ ಎಂಬ ತಲಾ 15 ತಿಥಿಗಳಿವೆ. ಇದು ಚಾಂದ್ರಮಾನ ಪದ್ಧತಿ.

ಚಾಂದ್ರಮಾನ ಪದ್ಧತಿಯ ವರ್ಷ (ಸಂವತ್ಸರ)ದ ಮೊದಲ ದಿನ ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದ ದಿನ. ಹಾಗಾಗಿ ಈ ಪದ್ಧತಿಯನ್ನು ಅನುಸರಿಸುವವರಿಗೆ ಈ ದಿನ ಯುಗಾದಿ ಯಾಗಿರುತ್ತದೆ. ಹಾಗಾಗಿ ಚಾಂದ್ರಮಾನ ಯುಗಾದಿ ಎಂದು ಕರೆಯಲಾಗುತ್ತದೆ.

ಇದೇ ರೀತಿ ಸೂರ್ಯನ ಗತಿಯನ್ನು ಆಧರಿಸಿ ಸೌರಮಾನ ಪದ್ಧತಿಯನ್ನು ರೂಪಿಸಲಾಗಿದೆ. ಸೂರ್ಯ ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನಸ್ಸು, ಮಕರ, ಕುಂಭ ಮತ್ತು ಮೀನ ಹೀಗೆ ಹನ್ನೆರಡು ರಾಶಿಗಳಲ್ಲಿ ಒಂದೊಂದು ತಿಂಗಳು ಇರುವುದರಿಂದ ಈ ಪದ್ಧತಿ ಅನುಸರಣೆಯನ್ನು ಸೌರಮಾನ ಎನ್ನಲಾಗುತ್ತದೆ.

ಹಾಗಾಗಿ ಸೂರ್ಯ ಮೇಷ ರಾಶಿಗೆ ಪ್ರವೇಶಿಸುವ ಸಂಕ್ರಮಣ ದಿನದ ಮರು ದಿನವನ್ನು ಸೌರಮಾನ ಯುಗಾದಿ ಎನ್ನಲಾಗುತ್ತದೆ. ಭಾರತದಲ್ಲಿ ಈ ಎರಡೂ ಪದ್ಧತಿಯನ್ನು ಅನುಸರಿಸಲಾಗುತ್ತದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ಸೌರಮಾನ ಪದ್ಧತಿ ಆಚರಿಸಲಾಗುತ್ತದೆ. ಉಳಿದಂತೆ ರಾಜ್ಯದ ಘಟ್ಟದ ಮೇಲಿನವರು, ಆಂಧ್ರಪ್ರದೇಶ ಸೇರಿದಂತೆ ಹಲವೆಡೆ ಚಾಂದ್ರಮಾನ ಪದ್ಧತಿ ಆಚರಿಸಲಾಗುತ್ತದೆ.

13-04-2021ರಂದು ಮಂಗಳವಾರ ನಮಗೆಲ್ಲಾ ಚಾಂದ್ರಮಾನ ಯುಗಾದಿ ಹಾಗೆಯೇ,
14-04-2021 ರಂದು ಸೌರಮಾನ ಯುಗಾದಿ ಆಚರಣೆಯಿದೆ.
ಹಿಂದೆಲ್ಲಾ ಎರಡು ಪದ್ಧತಿಯ ಹಬ್ಬದ ಆಚರಣೆಗೆ 10ರಿಂದ 15 ದಿನ ವ್ಯತ್ಯಾಸವಿರುತ್ತಿತ್ತು. ಶಾರ್ವರಿ ನಾಮ ಸಂವತ್ಸರದಲ್ಲಿ ಅಧಿಕಮಾಸ ಬಂದ ಕಾರಣ ಈಗ ಎರಡೂ ಒಟ್ಟೊಟ್ಟಿಗೆ ಬಂದಿರುವುದು ವಿಶೇಷ.

ಹಬ್ಬದ ದಿನ ಮುಂಜಾನೆ ಎದ್ದು ಹೊಸ ವರ್ಷ ಹರುಷ ತರಕೆಂದು ದೇವರಲ್ಲಿ ಪ್ರಾರ್ಥನೆ ಮಾಡಿ. ನಂತರ ಎಣ್ಣೆ ನೀರು ಸ್ನಾನ ಮಾಡಿ. ಹಬ್ಬದ ಅಂಗವಾಗಿ ಮನೆ ಮುಂದೆ ಸುಂದರ ರಂಗೋಲಿ ಬಿಡಿಸಿ, ಬಾಗಿಲುಗಳಿಗೆ ಮಾವಿನ ತಳಿರಿನ ತೋರಣ ಕಟ್ಟಿ, ಬೇವಿನ ಸೊಪ್ಪು ಸಿಕ್ಕಿಸಿ. ಶುದ್ಧ ಸ್ನಾನ ಮಾಡಿ, ಹೊಸ ಬಟ್ಟೆ ಧರಿಸಿ. ದೇವರಿಗೆ ಯಥಾ ಶಕ್ತಿ ಭಕ್ತಿಯಿಂದ ಪೂಜೆ ಸಲ್ಲಿಸಿ, ಮನೆ ಮಂದಿಯೊಂದಿಗೆ ದೇವರಿಗೆ ಸಮರ್ಪಿಸಿದ ಬೇವು ಬೆಲ್ಲವನ್ನು ಸ್ವೀಕರಿಸಿ. ಸಂಭ್ರಮದಿಂದ ಭೋಜನ ಮಾಡಿ.

ದೇವರು ಬಡತನ ಕೊಡಬಹುದು, ಆದರೆ ಕೊಳೆತನ ಕೊಡುವುದಿಲ್ಲ ಎಂಬುದು ಮನದಲ್ಲಿರಲಿ. ಅದ್ಧೂರಿ, ಆಡಂಬರ ಇಲ್ಲದಿದ್ದರೂ ಶುದ್ಧತೆ ಹಾಗೂ ಶುದ್ಧ ಮನಸ್ಸಿನಿಂದ ಹಬ್ಬ ಆಚರಣೆ ಮಾಡಿ.

ದಕ್ಷಿಣ ಭಾರತದ ಪ್ರಸಿದ್ಧ ದೊರೆ ಶಾಲಿವಾಹನ ಮಹಾರಾಜ, ಪಟ್ಟಾಭಿಷಿಕ್ತನಾದ ದಿನವಿದು. ಋತುಗಳಲ್ಲಿ ಅತ್ಯಂತ ಶ್ರೇಷ್ಠವಾದ ವಸಂತ ಋತು ಆಗಮನದ ದಿನವಿದು. ಪ್ರಕೃತಿಯಲ್ಲಿ ಮರಗಿಡ ಚಿಗುರಿ ನಳನಳಿಸುವ ಕಾಲವಿದು. ಇಂತಹ ಸಂಭ್ರಮದ ಹಬ್ಬವನ್ನು ಸಡಗರದಿಂದ ಆಚರಿಸೋಣ.

ಹಬ್ಬದ ದಿನ ಬೇವು ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಈ ಶ್ಲೋಕವನ್ನು ಹೇಳಿಕೊಳ್ಳಿ.
ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ|
ಸರ್ವಾರಿಷ್ಟ ವಿನಾಶಾಯ ನಿಂಬಕಂ ದಳ ಭಕ್ಷಣಂ||
(ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆ ಗಾಗಿ ಬೇವು ಬೆಲ್ಲ ಸೇವಿಸುತ್ತೇನೆ ). ಬೇವು ಬೆಲ್ಲ ತಿಂದು ಒಳ್ಳೆಯ ಮಾತನಾಡೋಣ, *ಶತ್ರುತ್ವ ಬಿಟ್ಟು ಪ್ರೀತಿಯ ಸ್ನೇಹತ್ವ ಬೆಳೆಸೋಣ.

 

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...

ಹೋಪ್ ಇಂಡಿಯಾ ಫೌಂಡೇಶನ್​ ವತಿಯಿಂದ ​ಕೊರೋನಾ ಮುಕ್ತ ಉಡುಪಿ ನಿರ್ಮಾಣ​ ಪಣ ​  ​​

ಉಡುಪಿ ಬೋರ್ಡ್ ಹೈಸ್ಕೂ​ನಲ್ಲಿ  ಆಶ್ರಯ ಪಡೆದಿರುವ ಭಿಕ್ಷುಕರು, ನಿರ್ಗತಿಕರು ಹಾಗೂ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸಂಶಯವಿದ್ದು ಅವರಿಂದ ಉಳಿದ ಸಾರ್ವಜನಿಕರಿಗೆ ಹರಡುವುದನ್ನು ತಪ್ಪಿಸಿ ಕೊರೋನಾ...

ಉಡುಪಿ ಜಿಲ್ಲೆ: 1197 ಗುಣಮುಖ ​~  5 ಸಾವು

ಉಡುಪಿ ಜಿಲ್ಲೆಯಲ್ಲಿ 745 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 316,  ಕಾರ್ಕಳ-113 ​,  ಕುಂದಾಪುರ- 307, ಮತ್ತು ಹೊರ ಜಿಲ್ಲೆಯ 9 ಮಂದಿ ಸೋಂಕಿಗೆ ಒಳಗಾಗಿದ್ದಾರೆ.​ 1197 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 39668 ಮಂದಿ...

 ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಆಮ್ಲಜನಕ ಘಟಕ ನಿರ್ಮಾಣ ಹಾಗು ಆರೋಗ್ಯ ಇಲಾಖೆಗೆ ಆಕ್ಸಿಜನ್ ಕೊನ್ಸನೇಟರ್ ಕೊಡುಗೆ

 ​ಉಡುಪಿ: ಕೊರೊನಾ ಪೀಡಿತರಿಗೆ ಉಂಟಾಗುತ್ತಿರುವ ಆಮ್ಲಜನಕ ಕೊರತೆಯನ್ನು ಗಮನಿಸಿ ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್ ಅವರು ಕಾರ್ಕಳದಲ್ಲಿ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ...
error: Content is protected !!