ಭರತ ಭೂಮಿಯ ಶ್ರದ್ದಾ ಪ್ರತೀಕ ನಮ್ಮ ಶ್ರೀರಾಮ ~ರಾಘವೇಂದ್ರ ಪ್ರಭು, ಕವಾ೯ಲು

ಹಿಂದೂಗಳ ಹೃದಯ ಸಾಮ್ರಾಟ, ಮರ್ಯಾದ ಪುರುಷೋತ್ತಮ, ದಶರಥ ನಂದನ ಶ್ರೀರಾಮ ಹುಟ್ಟಿದ ದಿನವನ್ನು ಶ್ರೀರಾಮನವಮಿ ಹಬ್ಬವೆಂದು ಆಚರಣೆ ಮಾಡಲಾಗುತ್ತಿದೆ.

 ಶ್ರೀ ರಾಮ ಜನ ನಾಯಕ:

ಶ್ರೀರಾಮ ರಾಮಾಯಣದ ಕಥಾ ನಾಯಕನಾಗಿದ್ದು, ಆದಿಕಾಲದ ಭಾರತದ ಅಯೋಧ್ಯೆಯ ರಾಜನೆಂದು ಕರೆಯಲಾಗುತ್ತದೆ. ದಶರಥ ಮಹಾರಾಜ ಶ್ರೀರಾಮನ ತಂದೆಯಾಗಿದ್ದು, ಹಿಂದೂ ಸಂಪ್ರದಾಯದಲ್ಲಿ ರಾಮನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ. ರಾಮನವಮಿ ಹಬ್ಬವನ್ನು ಚೈತ್ರ ಮಾಸದ 9ನೇ ದಿನದಂದು ಆಚರಣೆ ಮಾಡಲಾಗುತ್ತಿದ್ದು,

ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣವನ್ನು ಭಕ್ತಿ, ಶ್ರದ್ಧೆಗಳಿಂದ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ. 

 ಭಕ್ತಿ ಪ್ರದಾನವಾದ ಹಬ್ಬ: –

ರಾಮನವಮಿ ಹಬ್ಬ ಅತ್ಯಂತ ಸರಳ ಹಾಗೂ ಸುಲಭವಾಗಿದ್ದು, ಈ ಹಬ್ಬವನ್ನು ದೇಶದಾದ್ಯಂತ ಬಹಳಷ್ಟು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಪ್ರಮುಖವಾಗಿ ಉತ್ತರ ಭಾರತದಲ್ಲಂತೂ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. 

ಶ್ರೀರಾಮ ಜನಿಸಿದ ಸ್ಥಳ ಅಯೋಧ್ಯೆಯಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. 500 ವಷ೯ಗಳ ನಂತರ ಅಯೋಧ್ಯೆಯಲ್ಲಿ ರಾಮ ನವಮಿ ವೈಭವದಿಂದ ನಡೆಯುತ್ತಿದ್ದು, ಸೂಯ೯ ರಶ್ಮಿಶ್ರೀ ರಾಮನ ಹಣಿಗೆ ತಿಲಕ ರೂಪದಲ್ಲಿ ಗೋಚರಿಸಿದ್ದು, ಅದ್ಬುತವೇ ಸರಿ.

 ಹಬ್ಬದ ದಿನದಂದು ರಾಮನ ಭಜನೆ, ಕೀರ್ತನೆ ಹಾಗೂ ಮೆರವಣಿಗಳನ್ನು ನಡೆಸಲಾಗುತ್ತದೆ. ರಾಮನವಮಿಯಂದು ಸೂರ್ಯ ದೇವನ ಪ್ರಾರ್ಥನೆಯೊಂದಿಗೆ ಹಬ್ಬ ಆರಂಭವಾಗುತ್ತದೆ. ಏಕೆಂದರೆ, ಶ್ರೀರಾಮನು ಸೂರ್ಯವಂಶಸ್ಥನಾಗಿದ್ದು, ಶಕ್ತಿಯ ಪ್ರತೀಕವಾಗಿರುವ ಸೂರ್ಯ ದೇವರ ಆರಾಧನೆ ಮೂಲಕ ರಾಮನವಮಿ ಆರಂಭವಾಗುತ್ತದೆ. ಹಬ್ಬದ ದಿನದಂದು ರಾಮನ ಸ್ತೋತ್ರ ಹಾಗೂ ಭಜನೆಗಳನ್ನು ಹಾಡುವ ಮೂಲಕ ದೇವರನ್ನು ಸಂಪ್ರೀತಿಗೊಳಿಸಲಾಗುತ್ತದೆ

ಈ ದಿನ ದೇಶದ ಹಲವು ರಾಮ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ. 

ಹಬ್ಬದ ದಿನದಂದು ಪ್ರತೀಯೊಬ್ಬರೂ ಜಾತಿ, ಧರ್ಮವೆಂಬ ಕಟ್ಟಳೆಗಳನ್ನ ಬದಿಗೊತ್ತಿ ಕೋಸಂಬರಿ, ಮಜ್ಜಿಗೆ ಹಾಗೂ ಪಾನಕ ಗಳನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಮೆರೆಯುತ್ತಾರೆ. ವಸುದೈವ ಕುಟುಂಬಕಂ ಅಂದರೆ ಇಡೀ ವಿಶ್ವವೇ ಒಂದು ಕುಟುಂಬ ಎಂಬುದನ್ನು ಜಗತ್ತಿಗೆ ಸಾರಿ ಹೇಳಲು ಇಂತಹ ಹಬ್ಬಗಳು ಮಹತ್ವಪೂರ್ಣವಾಗಿವೆ. 

 ಹಬ್ಬದ ಆಚರಣೆ ಹೇಗೆ?

ರಾಮ ಮನೆದೇವರು ಇರುವವರು ಹಬ್ಬವನ್ನು 9 ದಿನಗಳ ಕಾಲ ಆಚರಣೆ ಮಾಡುತ್ತಾರೆ. ಚೈತ್ರ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ. ಹೀಗೆ 9 ದಿನದ ರಾಮನ ಉತ್ಸವ ಆಚರಿಸಲಾಗುತ್ತದೆ. 

 ರಾಮನಾಮ ಬರೆಯುವುದು. ರಾಮನಾಮ ಜಪಿಸಿದರೆ ರಾಮ ನಮ್ಮನ್ನು ಸಂರಕ್ಷಿಸುತ್ತಾನೆಂಬ ನಂಬಿಕೆ ಇದೆ.

ಒಟ್ಟಾಗಿ ನಮ್ಮ ಶ್ರದ್ದಾ ಪ್ರತೀಕ ಶ್ರೀ ರಾಮ ನವಮಿಯ ಶುಭಾಶಯ ತಿಳಿಸುತ್ತಾ , ನಾವೆಲ್ಲರೂ ರಾಮನ ಗುಣಗಳನ್ನು ನಮ್ಮ ಜೀವನದಲ್ಲಿ ಪಾಲನೆ ಮಾಡೋಣ.

✍🏻 ರಾಘವೇಂದ್ರ ಪ್ರಭು, ಕವಾ೯ಲು

ಯುವ ಲೇಖಕ

 
 
 
 
 
 
 
 
 
 
 

Leave a Reply