ಸ್ವಾತಂತ್ರ್ಯ ಪಡೆದ ನಂತರದ ಭಾರತದ ಸ್ಥಿತಿ

ಪ್ರಸ್ತುತ ನಾವು ಸ್ವತಂತ್ರ ಭಾರತದಲ್ಲಿ ವಾಸಿಸುತ್ತಿದ್ದೇವೆ. ಇಂದು ನಮ್ಮ ದೇಶದಲ್ಲಿ ನಮಗೆ ಯಾವ ರೀತಿಯ ಚಿತ್ರಣ ಕಾಣಿಸುತ್ತಿದೆ ? ಇಂದು ಎಲ್ಲೆಡೆ ಭಯೋತ್ಪಾದನೆ ಹಬ್ಬಿಕೊಂಡಿದೆ. ಭಾರತದಲ್ಲಿನ ಕಾಶ್ಮೀರ, ಪಂಜಾಬ, ಗುಜಾರಾತ, ಸಿಕ್ಕಿಂ ಮುಂತಾದ ರಾಜ್ಯಗಳ ಮೇಲೆ ಗಡಿಯಲ್ಲಿ ರುವ ದೇಶಗಳಿಂದ ಆಕ್ರಮಣಗಳಾಗುತ್ತಿವೆ. ಪ್ರತಿದಿನ ಬಹುದೊಡ್ಡ ಪ್ರಮಾಣದಲ್ಲಿ ಅತಿಕ್ರಮಣಕಾರರು ದೇಶದೊಳಗೆ ನುಸುಳಿ ದೊಡ್ಡ ದೊಡ್ಡ ನಗರಗಳಲ್ಲಿ ಬಾಂಬ್ ಸ್ಫೋಟ ನಡೆಸುತ್ತಿದ್ದಾರೆ. ಭಯೋತ್ಪಾದಕರು ನೀಡುತ್ತಿರುವ ಬೆದರಿಕೆಯಿಂದಾಗಿ ಸ್ವಾತಂತ್ರ್ಯೋತ್ಸವ, ಗಣ ರಾಜ್ಯೋತ್ಸ ವ ಮುಂತಾದ ರಾಷ್ಟ್ರೀಯ ಹಬ್ಬಗಳನ್ನು ಸಹ ಪೊಲೀಸು ಬಂದೋಬಸ್ತಿನಲ್ಲಿ ಆಚರಿಸಬೇಕಾಗುತ್ತದೆ. ಹಾಗಾದರೆ ನಮ್ಮ ಭಾರತ ದೇಶವು ನಿಜವಾದ ಅರ್ಥದಲ್ಲಿ ಸ್ವತಂತ್ರವಾಗಿದೆಯೇನು ? ರಕ್ಷಣೆಯು ನಮಗೆ ಲಭಿಸುತ್ತಿದೆಯೇ?ನಿಮಗೆಲ್ಲ ಏನನಿಸುತ್ತದೆ ? ಇಲ್ಲವಲ್ಲ ! ಇದಕ್ಕಾಗಿ ನಾವೆಲ್ಲರೂ  ರಾಷ್ಟ್ರಾಭಿಮಾನ  ಬೆಳೆಸುವುದು ಅತ್ಯಗತ್ಯವಾಗಿದೆ. ನಮಗೆ ದೇಶದ ಸಂವಿಧಾನ ಮೊದಲು ಧಮ೯ ನಂತರ ವಾಗಬೇಕಾಗಿದೆ.
 *ಇದಕ್ಕಾಗಿ ನಾವು  ಏನು ಮಾಡಬಹುದು: ರಾಷ್ಟ್ರಧ್ವಜದ ಗೌರವವನ್ನು ಕಾಪಾಡೋಣ. ಆಗಸ್ಟ್ 15 ಮತ್ತು ಜನವರಿ 26 ಈ ರಾಷ್ಟ್ರೀಯ ದಿನಗಳಂದು ಚಿಕ್ಕ ಆಕಾರದ ಕಾಗದದ ರಾಷ್ಟ್ರ ಧ್ವಜಗಳನ್ನು ವ್ಯಾಪಕ ಸ್ತರದಲ್ಲಿ ಮಾರಾಟ ಮಾಡುತ್ತಾರೆ. ಚಿಕ್ಕ ಮಕ್ಕಳ ಸಹಿತ ಅನೇಕ ಜನರು ರಾಷ್ಟ್ರಭಕ್ತಿ ಮತ್ತು ಉತ್ಸಾಹವನ್ನು ವ್ಯಕ್ತಪಡಿಸಲು ಈ ರಾಷ್ಟ್ರಧ್ವಜಗಳನ್ನು ಖರೀದಿಸುತ್ತಾರೆ (ಪ್ಯಾಸ್ಟಿಕ್ ನಿಂದ ತಯಾರಿಸಲಾದ) ಮತ್ತು ಅವುಗಳನ್ನು ಹೇಗೇಗೋ ಇಡುತ್ತಾರೆ. ಕೆಲವು ದಿನಗಳ ನಂತರ ಇದೇ ಧ್ವಜಗಳನ್ನು ಹರಿದು ರಸ್ತೆಯ ಮೇಲೆ, ಕಸದ ತೊಟ್ಟಿಯಲ್ಲಿ ಮತ್ತು ಇತರ ಕಡೆಗಳಲ್ಲಿ ಬಿಸಾಡುತ್ತಾರೆ. ಹೀಗೆ ಮಾಡಿ ನಾವು ರಾಷ್ಟ್ರಧ್ವಜವನ್ನು ಅಂದರೆ ರಾಷ್ಟ್ರವನ್ನೇ ಅವಮಾನ ಮಾಡುತ್ತೇವೆ. ಅಲ್ಲದೆ ಕರೋನಾದ ಈ ಸಂದಭ೯ದಲ್ಲಿ ದೇಶದ ಧ್ವಜವನ್ನು ಹೋಲುವ ಮಾಸ್ಕ್ ಹಾಕಲಾಗುತ್ತಿದೆ. ಇದು ಸರಿಯಲ್ಲ ಈ ಬಗ್ಗೆ ಸಕಾ೯ರ ಸ್ಪಷ್ಟವಾದ ನಿಣ೯ ಯ ತೆಗೆದುಕೊಳ್ಳಬೇಕಾದ ಅಗತ್ಯವಿದೆ.
 ನಮ್ಮ ದೇಶದ ಧ್ವಜ ನಮಗೆ ಪವಿತ್ರವಸ್ತುವಾಗಿದೆ: ನಾವೆಲ್ಲರೂ ನಮ್ಮ ಧ್ವಜದ ಗೌರವವನ್ನು ಕಾಪಾಡಬೇಕು. ಇತರ ಯಾರಾದರೂ ಧ್ವಜದ ಅಪಮಾನ ಮಾಡುತ್ತಿದ್ದಲ್ಲಿ ಅವರಿಗೆಲ್ಲ ನಾವು ತಿಳಿಸಿ ಹೇಳಬೇಕು.ಮತ್ತು ನಮ್ಮ ರಾಷ್ಟ್ರೀಯ ಕರ್ತವ್ಯವನ್ನು ನಿಭಾಯಿಸಬೇಕಾಗಿದೆ. ಆಗಸ್ಟ್ 15ಮತ್ತು ಜನವರಿ 26 ರ ನಂತರ ಇತರೆಡೆಗಳಲ್ಲಿ ಬಿದ್ದಿರುವ ಧ್ವಜಗಳನ್ನು ನಾವು ಎತ್ತಿಡೋಣ. ಇದರ ಕುರಿತು ನಾವು ನಮ್ಮ ಮಿತ್ರರಿಗೂ, ನೆರೆಹೊರೆಯವರಿಗೂ ತಿಳಿಸುವ ಕಾಯ೯ ಮಾಡಬೇಕು ಇದು ಕೂಡ ದೇಶ ಸೇವೆ ಮಾಡಿದ ಹಾಗೆ. ರಾಷ್ಟ್ರೀಯ ಹಬ್ಬಗಳಂದು ಸ್ವಾತಂತ್ರ್ಯವೀರರು ರಾಷ್ಟ್ರಕ್ಕಾಗಿ ಮಾಡಿದ ತ್ಯಾಗ ಬಲಿದಾನವನ್ನು ನೆನಪಿಸಿಕೊಂಡು ಅವರ ಆದಶ೯ ವನ್ನು ಜೀವನದಲ್ಲಿ ರೂಡಿಸಿಕೊಳ್ಳಲು  ಪ್ರಯತ್ನಿಸೋಣ.
 
ವಿದ್ಯಾಥಿ೯ಗಳೇ ನೆನಪಿಡಿ:  ಆಗಸ್ಟ್ 15 ರಂದು ಬೆಳಗ್ಗೆ ಧ್ವಜವಂದನೆಗಾಗಿ ನಾವೆಲ್ಲರೂ ಒಟ್ಟಾಗೋಣ ( ಕರೋನಾದ ನಿಯಮ ಪಾಲಿಸಿ) ವಿದ್ಯಾಥಿ೯ಗಳು ಧ್ವಜವಂದನೆಯಾದ ಬಳಿಕ ಶಾಲೆಗೆ ರಜೆ ಇರುವುದು ಎಲ್ಲರಿಗೂ ಗೊತ್ತಿರುವುದರಿಂದ ಹೆಚ್ಚಿನ ಮಕ್ಕಳು ಶಾಲೆಗೆ ಹೋಗದೇ ಮನೆಯಲ್ಲಿಯೇ ತುಂಬಾ ಹೊತ್ತಿನ ತನಕ ಮಲಗುವುದು, ಮನೆಯಲ್ಲಿ ಟಿ.ವಿ ಮೊಬೈಲ್ ನೋಡುತ್ತಾ ಕುಳಿತುಕೊಳ್ಳುವುದು, ಊರಿಗೆ ಹೋಗು ವುದು ಇತ್ಯಾದಿಗಳನ್ನು ಮಾಡುತ್ತಿರುತ್ತಾರೆ. ಅದರ ಬದಲು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯವೀರರನ್ನು ಮತ್ತು ಕ್ರಾಂತಿ ಕಾರರನ್ನು ನೆನಪಿಸಿಕೊಂಡು ಅವರಲ್ಲಿರುವ ಯಾವ ಗುಣದಿಂದಾಗಿ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದರೋ, ಆ ಗುಣಗಳನ್ನು ನಾವು ನಮ್ಮಲ್ಲಿ ಪಾಲಿಸಿಅವರಂತೆ ಆದರ್ಶರಾಗಿ ವರ್ತಿಸಲು ಪ್ರಯತ್ನಿಸೋಣ.ಲೋಕಮಾನ್ಯ ತಿಲಕರು, ಸ್ವಾತಂತ್ರ ವೀರ ಸಾವರಕರರು ಮುಂತಾದ ದೇಶ ಭಕ್ತರು ತಮ್ಮ ಶರೀರ ಮತ್ತು ಮನಸ್ಸುಗಳನ್ನು ಸುದೃಢವಾಗಿಟ್ಟುಕೊಳ್ಳಲು ಸಹ ಪ್ರಯತ್ನ ಮಾಡುತ್ತಿದ್ದರು. ನಮ್ಮ ಮನಸ್ಸು ಸುದೃಢವಾಗಿದ್ದರೆ ನಾವು ಯಾವುದೇ ಪ್ರಸಂಗವನ್ನು ಧೈರ್ಯದಿಂದ ಎದುರಿಸಬಲ್ಲೆವು. ಮನಸ್ಸು ಸುದೃಢವಾಗಲು ನಮ್ಮಲ್ಲಿ ಆತ್ಮವಿಶ್ವಾಸ ಬರುವುದು ಅತ್ಯಗತ್ಯವಾಗಿದೆ.
ನಮ್ಮಲ್ಲಿ ಅಮಿತವಾದ ಆತ್ಮವಿಶ್ವಾಸವಿದ್ದರೆ ಯಾವುದೇ ಕೆಲಸಗಳನ್ನು ಮಾಡಲು ಕಷ್ಟವಾಗುವುದಿಲ್ಲ. ಅದಕ್ಕಾಗಿ ಪ್ರತಿಯೊಂದು ಕೆಲಸ  ಮಾಡುವಾಗ ಶ್ರದ್ದೆಯಿಂದ ಮಾಡಬೇಕು ರಾಷ್ಟ್ರದ ಕೆಲಸ ದೇವರ ಸೇವೆಯಾಗಿದೆ. ವಿದ್ಯಾಥಿ೯ಗಳು ಸೇರಿದಂತೆ ಯುವ ಜನಾಂಗವು ತನ್ನ ಶರೀರವು ಸುದೃಢವಾಗಲು ವ್ಯಾಯಾಮ ಮಾಡುವುದು. ಈಗಿನ ಕಾಲದಲ್ಲಿ ಮನಸ್ಸನ್ನು ಸುದೃಢಗೊಳಿಸುವಂತೆ ನಮ್ಮ ಶರೀರವನ್ನು ಸಹ ಸುದೃಢವನ್ನಾಗಿಡುವುದು ಅತ್ಯಗತ್ಯವಾಗಿದೆ. ಅದಕ್ಕಾಗಿ ನಾವು ಪ್ರತಿದಿನ ವ್ಯಾಯಾಮ ಮಾಡುವುದು ಆವಶ್ಯಕವಾಗಿದೆ. ನಮ್ಮಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಪ್ರಯತ್ನ ಮಾಡುವುದು ಪ್ರತಿಯೊಂದು ವಿಷಯವನ್ನು ಸಮಯಕ್ಕೆ ಸರಿಯಾಗಿ ಮಾಡುವುದು, ಪ್ರಾಮಾಣಿಕ ವಾಗಿ ಮಾಡುವುದು ಹಿರಿಯರನ್ನು ಗೌರವಿಸುವುದು, .  ಮುಂತಾದ ವಿಷಯಗಳನ್ನು ಅಂದರೆ ನೈತಿಕ ಮೌಲ್ಯಗಳನ್ನು ನಮ್ಮಲ್ಲಿ ಅಳವಡಿಸಿ ಕೊಳ್ಳುವುದು ಆವಶ್ಯಕವಾಗಿದೆ.
ಆದುದರಿಂದ ಇಂದಿನಿಂದಲೇ ನಾವು ನಮ್ಮ ದೇಶದ ಉತ್ತಮ ಪ್ರಜೆಗಳಾಗಲು ಪ್ರಯತ್ನ ಮಾಡಬೇಕು. ನಮ್ಮ ಪುಸ್ತಕದಲ್ಲಿ ನೀಡಿದ ಪ್ರತಿಜ್ಞೆ ಯಂತೆ ನಾವು ರಾಷ್ಟ್ರಾಭಿಮಾನ ಮತ್ತು ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸೋಣ ಮತ್ತು ಇಡೀ ಜಗತ್ತಿನಲ್ಲಿ ನಮ್ಮ ರಾಷ್ಟ್ರದ ಹೆಸರನ್ನು ಉಜ್ವಲಗೊಳಿಸಲು ಸನ್ನದ್ಧರಾಗಬೇಕು. ಇಂದಿನ ದಿನದಂದು ಭಾರತಮಾತೆಯನ್ನು ಆನಂದದಲ್ಲಿಡುವ ಪ್ರತಿಜ್ಞೆಯನ್ನು ಮಾಡೋಣ. ನಾವು ಇಂದು ರಾಜಕೀಯ ಸ್ವಾತಂತ್ರ ಮಾತ್ರ ಪಡೆದಿಲ್ಲ ಬದಲಾಗಿ ವಿವಿಧ ರೀತಿಯ ಸ್ವಾತಂತ್ರ್ಯ ಪಡೆದಿದ್ದೇವೆ. ನಮ್ಮ ಸಂವಿಧಾನ ನಮಗೆ ಮೂಲ ಭೂತ ಹಕ್ಕುಗಳೊಂದಿಗೆ ಕತ೯ವ್ಯವನ್ನು ನೀಡಿದೆ ಇದನ್ನು ನಾವು ಮನಗಾಣಬೇಕು ಸಮಾಜದಲ್ಲಿ ಇಂದು ನಡೆಯುತ್ತಿರುವ ಗಲಭೆಗಳು ಸಾವ೯ಜನಿಕ ಆಸ್ತಿಪಾಸ್ತಿಯನ್ನು ಹಾನಿ ಮಾಡುವುದು ಇದನ್ನು ಕಂಡಾಗ ನಾವು ನಮ್ಮ ಕತ೯ವ್ಯದಲ್ಲಿ ಎಲ್ಲಿಯೋ ಒಂದು ಕಡೆ ಸೋತಿದ್ದೇವೆ – ದೇಶದ ಭದ್ರತೆಗೆ ಕುಂದು ತರುವ ದೇಶ ವಿರೋಧಿಗಳನ್ನು ಶಿಕ್ಷಿಸಬೇಕು. ಸ್ವಾತಂತ್ರ್ಯ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಅದು ತ್ಯಾಗದ ಸಂಕೇತವಾಗಿದೆ ಎಂಬುದನ್ನು ನಾವು ಮರೆಯಬಾರದು.
ದೇಶ ಮೊದಲು:  ನಮಗೆ ಜಾತಿ ಮತ ಧಮ೯ ಮನೆಯ ಆಚರಣೆಗೆ ಮಾತ್ರ ಸೀಮಿತವಾಗಬೇಕು ದೇಶವು ಎಲ್ಲಕ್ಕಿಂತ ಮೊದಲು ‘ ಎಂಬು ದನ್ನು ಮರೆಯಬಾರದು ನಮ್ಮ ಸೈನಿಕರು ಗಡಿಯಲ್ಲಿ ಬಿಸಿಲು ಚಳಿಯನ್ನು ಲೆಕ್ಕಿಸದೆ ಎಚ್ಚರವಾಗಿ ಕತ೯ವ್ಯ ನಿವ೯ಹಿಸುತ್ತಿರುವ ಕಾರಣ ನಾವು ಆರಾಮವಾಗಿ ಮಲಗಲು ಸಾಧ್ಯವಾಗಿದೆ ಹೀಗಾಗಿ ನಾವೆಲ್ಲರೂ ಅವರನ್ನು ಅಭಿನಂದಿಸಬೇಕಾಗಿದೆ.“ಜನನಿ ಜನ್ಮ ಭೂಮಿಶ್ಚ ಸ್ವಗ೯ದಪಿ ಗರಿಯಸಿ ” ಎಂಬಂತೆ ತಾಯಿ ಮತ್ತು ಭೂಮಿ ಸ್ವಗ೯ ಕ್ಕಿಂತ ಮೇಲು .ದೇಶ ಉಳಿದರೆ ಮಾತ್ರ ನಾವು ಉಳಿಯುವುದು ಎಂಬ ಸತ್ಯ ನಮಗೆ ತಿಳಿದಿರಬೇಕು.ನಮ್ಮ ದೇಶ ಮತ್ತೆ ಜಗತ್ತಿಗೆ ಗುರುವಾಗ ಬೇಕಾದರೆ ಪ್ರತಿಯೊಬ್ಬರ ಕೊಡುಗೆ ಅಗತ್ಯವಿದೆ.ಈ ಸ್ವಾತಂತ್ರ ನಮಗೆ ದಾರಿದೀಪವಾಗಲಿ.
ರಾಘವೇಂದ್ರ ಪ್ರಭು, ಕವಾ೯ಲು ಯುವ ಲೇಖಕ
 
 
 
 
 
 
 
 
 
 
 

Leave a Reply