ಯು ಪಿ ಎಂ ಸಿ ಯಲ್ಲಿ ಕವಿಗೋಷ್ಠಿ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಕುಂಜಿಬೆಟ್ಟು ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಕವಿಗೋಷ್ಠಿಯನ್ನು 21 ಅಕ್ಟೋಬರ್ ಶನಿವಾರ ಬೆಳಗ್ಗೆ 11:30ಕ್ಕೆ ಆಯೋಜಿಸಲಾಗಿದೆ .

ಕವಿಗೋಷ್ಠಿಯ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಆಶಾ ಕುಮಾರಿ ನೆರವೇರಿಸ ಲಿದ್ದಾರೆ. ಸಭಾಧ್ಯಕ್ಷತೆಯನ್ನು ಕಸಾಪ ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಹೆಚ್ ಪಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಸಾಪ ಉಡುಪಿ ಜಿಲ್ಲೆಯ ಕೋಶಾಧ್ಯಕ್ಷರಾದ ಮನೋಹರ್, ಕವಿಗೋಷ್ಠಿಯ ಸಂಚಾಲಕರಾದ ಉಪನ್ಯಾಸಕ ರಾಘವೇಂದ್ರ ಜಿ.ಜಿ, ಕವಿಗೋಷ್ಠಿಯ ಆಶಯ ನುಡಿಯನ್ನು ಕವಯಿತ್ರಿ ಪೂರ್ಣಿಮಾ ಸುರೇಶ್ ನಿರ್ವಹಿಸಲಿದ್ದಾರೆ.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ರಂಗನಟ ರಾಜೇಶ್ ಭಟ್ ಪಣಿಯಾಡಿ ವಹಿಸಲಿದ್ದು, ಸುಮಾರು 11 ಯುವ ಕವಿಗಳು ಭಾಗವಹಿಸಲಿದ್ದಾರೆ. ಎಂದು ಕ ಸಾ ಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಹಾಗೂ ರಂಜಿನಿ ವಸಂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply