ಅಂಬಲಪಾಡಿ ಗ್ರಾಮೋತ್ಥಾನ ಸಮಿತಿ ಉದ್ಘಾಟನೆ, ಕುಂಜಗುಡ್ಡೆಯಲ್ಲಿ ಕೈ ನೇಜಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಅಂಬಲಪಾಡಿ : ಕುಂಜಗುಡ್ಡೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬಲಪಾಡಿ ಗ್ರಾಮೋತ್ಥಾನ ಸಮಿತಿಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ಚಾಲನೆ ನೀಡಿದರು.ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ನಗರಸಭಾ ಸದಸ್ಯ ಹರೀಶ್ ಶೆಟ್ಟಿ ಅಂಬಲಪಾಡಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಗೌರವ ಸಂಚಾಲಕ ಯೋಗೀಶ್ ಶೆಟ್ಟಿ, ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಸ್ಥಳೀಯ ಹಿರಿಯ ಕೃಷಿಕ ಸಂಜೀವ ಶೆಟ್ಟಿ, ಕುಂಜಗುಡ್ಡೆ ಫ್ರೆಂಡ್ಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ, ಗ್ರಾಮೋತ್ಥಾನ ಸಮಿತಿ ಸಹ ಸಂಚಾಲಕರಾದ ರಾಜೇಶ್ ಸುವರ್ಣ, ಮಹೇಂದ್ರ ಕೋಟ್ಯಾನ್, ಹರೀಶ್ ಆಚಾರ್ಯ, ವಿನೋದ್ ಪೂಜಾರಿ, ಅಣ್ಣು ಪದ್ಮನಾಭ ಜತ್ತನ್, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಭಾಸ್ಕರ್, ಸುಜಾತಾ ಶೆಟ್ಟಿ, ಕುಸುಮ, ಸುಮಂಗಲ ಹಾಗೂ ಗ್ರಾಮೋತ್ಥಾನ ಸಮಿತಿಯ ಸದಸ್ಯರು, ಕುಂಜಗುಡ್ಡೆ ಫ್ರೆಂಡ್ಸ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಆಶ್ರಯದಲ್ಲಿ ನಡೆದ ಹಡಿಲು ಭೂಮಿ ಅಭಿಯಾನದಡಿ ಟ್ರಸ್ಟ್ ಮತ್ತು ಕೃಷಿಕರಿಂದ ಅಂಬಲಪಾಡಿ ಗ್ರಾಮದಲ್ಲಿ ಸುಮಾರು 35 ಎಕ್ರೆ ಹಡಿಲು ಭೂಮಿ ಕೃಷಿ ಚಟುವಟಿಕೆ ನಡೆದಿದ್ದು, ಇದರ ಕೊನೆಯ ಭಾಗವಾಗಿ ಅಂಬಲಪಾಡಿ ಕುಂಜಗುಡ್ಡೆ ಪ್ರದೇಶದಲ್ಲಿ ಸುಮಾರು 1 ಎಕ್ರೆಗೂ ಮಿಕ್ಕಿ ಹಡಿಲು ಗದ್ದೆಯಲ್ಲಿ ಕೈ ನೇಜಿ ನೆಡುವ ಕಾರ್ಯಕ್ರಮಕ್ಕೆ ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್ ಚಾಲನೆ ನೀಡಿದರು.

ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಮತ್ತು ಕುಂಜಗುಡ್ಡೆ ಫ್ರೆಂಡ್ಸ್ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಕೈ ನೇಜಿ ನೆಡುವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

 
 
 
 
 
 
 
 
 
 
 

Leave a Reply