Janardhan Kodavoor/ Team KaravaliXpress
24.6 C
Udupi
Thursday, July 7, 2022
Sathyanatha Stores Brahmavara

ಬೈಂದೂರು ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ

ನರೇಂದ್ರ ಮೋದಿಯವರ 70 ನೆ ಹುಟ್ಟು ಹಬ್ಬದ ಅಂಗವಾಗಿ ಬೈಂದೂರು ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಉಚಿತ ನೇತ್ರ ತಪಾಸಣೆ, ಪೊರೆ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಶಿಬಿರವು ಮಲಸಾ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆಯಿತು.ಈ ಶಿಬಿರದಲ್ಲಿ 410 ಜನರಿಗೆ ತಪಾಸಣೆ ಮಾಡಲಾಗಿದ್ದು, ಅದರಲ್ಲಿ 205 ಜನರಿಗೆ ಉಚಿತ ಕನ್ನಡಕ ಹಾಗೂ ಶಸ್ತ್ರ ಚಿಕಿತ್ಸೆಗೆ 70 ಜನರನ್ನು ನೋಂದಣಿ ಮಾಡಲಾಗಿದೆ. ಸಭಾ ಕಾರ್ಯಕ್ರಮದ ಅಧ್ಯ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್ ವಹಿಸಿದ್ದರು. ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರು ಆದ ವೀಣಾಎಸ್ ಶೆಟ್ಟಿ ಕಾರ್ಯಕ್ರಮದ ಉದ್ಘಾಟನೆ ಮಾಡಿದರು.

ವೇದಿಕೆಯಲ್ಲಿ ಪ್ರಸಾದ್ ನೇತ್ರಾಲಯದ ಡಾಕ್ಟರ್ ಕೃಷ್ಣ ಪ್ರಸಾದ್, ಮಹಿಳಾ ಮೋರ್ಚ್ ಉಸ್ತುವಾರಿ ಗೀತಾಂಜಲಿ ಸುವರ್ಣ, ಜಿಲ್ಲಾ ಪಂಚಾಯತ್ ಸದಸ್ಯರಾದ ಶೋಭಾ ಪುತ್ರನ್,ಬಾಬು ಶೆಟ್ಟಿ,ಸುರೇಶ್ ಬಟ್ವಾಡಿ,ತಾಲ್ಲೂಕು ಪಂಚಾಯತ್ ಸದಸ್ಯರಾದ ಶ್ಯಾಮಲಾ ಕುಂದರ್, ಮಂಡಲ ಕಾರ್ಯದರ್ಶಿ ಕಿಶೋರ್ ಶೆಟ್ಟಿ,ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತ ಬಾಲಕೃಷ್ಣ ಹಾಗೂ ಬೈಂದೂರು ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಖಾರ್ವಿ ಉಪಸ್ಥಿತರಿದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ ಪ್ರಾಸ್ತಾವಿಕ ಭಾಷಣ ಮಾಡಿದರು, ಪ್ರಕಾಶ್ ಪೂಜಾರಿ ಯವರು ಧನ್ಯವಾದ ಅರ್ಪಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!