ಪುತ್ತೂರು ಬ್ರಾಹ್ಮಣ ಮಹಾಸಭಾ- ವನಮಹೋತ್ಸವ ಕಾರ್ಯಕ್ರಮ

ಉಡುಪಿ ಪುತ್ತೂರು ಬ್ರಾಹ್ಮಣ ಮಹಾಸಭಾದ ವತಿಯಿಂದ ಶನಿವಾರ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ನಿವೃತ್ತ ಪ್ರಿನ್ಸಿಪಾಲ್ ಪಿ.ಜಿ.ಪಂಡಿತ್ ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರೀ ದೇವಸ್ಥಾನದ ಪರಿಸರದಲ್ಲಿ ಗಿಡ ನಡುವುದರ ಮೂಲಕ ಉದ್ಘಾಟಿಸಿ, ಮಾತನಾಡಿ, ವಾಹನಗಳು ಜಾಸ್ತಿಯಾಗಿ ಮತ್ತು ಮರಗಳ ನಾಶದಿಂದ ವಾಯು ಮಾಲಿನ್ಯ ಹೆಚ್ಚಾಗುತಿದ್ದು, ಅದನ್ನು ಸರಿ ಪಡಿಸಬೇಕಾದಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ನಟ್ಟು ಪೋಷಿಸುವಂತಹ ಕಾರ್ಯ ಆಗಬೇಕು ಎಂದರು. 

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷೆ ಶುಭಾ ಬಾಳ್ತಿಲ್ಲಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಿ.ಜಿ.ಪಂಡಿತ್ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಹಾಸಭಾದ ಗೌರವಾಧ್ಯಕ್ಷ ಕೃಷ್ಣಮೂರ್ತಿ ಭಟ್, ಕೋಶಾಕಾರಿ ಕೃಷ್ಣಪ್ರಸಾದ್ ಕಾರಂತ್, ದೇವಳದ ಅರ್ಚಕ ದಾಮೋದರ ಭಟ್, ಮಹಾಸಭಾದ ಉಪಾಧ್ಯಕ್ಷ ಚಂದ್ರ ಶೇಖರ ಅಡಿಗ, ಉಪಾಧ್ಯಕ್ಷೆ ಸುನೀತಾ ಚೈತನ್ಯ ಮತ್ತು ಮಹಾಸಭಾದ ಸದಸ್ಯರು ಉಪಸ್ಥಿತರಿದ್ದರು. 

ಮಹಾ ಸಭಾದ ಮಾಜಿ ಅಧ್ಯಕ್ಷ ಚೈತನ್ಯ ಎಂ.ಜಿ ರೂಪಿಸಿದರು. ನಂತರ ಮಹಾಸಭಾದ ಸದಸ್ಯರಿಂದ ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರೀ ದೇವಸ್ಥಾನದ ಪರಿಸರದಲ್ಲಿ ವಿವಿಧ ಹಣ್ಣಿನ ಗಿಡಗಳು ಮತ್ತು ನವಗೃಹ ಗಿಡಗಳನ್ನು ನೆಡಲಾಯಿತು.

 
 
 
 
 
 
 
 

Leave a Reply