ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ 20 ನೇ ವಾರ್ಷಿಕ ಮಹಾಸಭೆ

ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ 20 ನೇ ವಾರ್ಷಿಕ ಮಹಾಸಭೆಯು ಸೆ:17 ರಂದು ಚಿಟ್ಪಾಡಿ ಶ್ರೀನಿವಾಸ ದೇವಸ್ಥಾನದಲ್ಲಿ ಜರುಗಲಿದೆ. ಪೂ 8 ಕ್ಕೆ ವಿಪ್ರ ಸದಸ್ಯರಿಂದ ವಿಷ್ಣು ಸಹಸ್ರನಾಮ ಪಾರಾಯಣ ಶ್ರೀನಿವಾಸ ದೇವರಿಗೆ ತುಳಸಿ ಅರ್ಚನೆ ಸಾಮೂಹಿಕ ಸತ್ಯನಾರಾಯಣ ಪೂಜೆ 10:30ರ ಸಭಾ ಕಾರ್ಯಕ್ರಮದಲ್ಲಿ ಪ್ರತಿಭಾವಂತ  ವಿದ್ಯಾರ್ಥಿಗಳಿಗೆ ಪುರಸ್ಕಾರ ಹಿರಿಯ ಸದಸ್ಯರಿಗೆ ಸನ್ಮಾನ, ಆಶಕ್ತರಿಗೆ ಆರ್ಥಿಕ ನೆರವು ಹಾಗೂ ಶ್ರೀ ಪುತ್ತಿಗೆ ವಿದ್ಯಾ ಪೀಠದ ವಿಶ್ರಾಂತ ಪ್ರಾಂಶುಪಾಲ ವಿದ್ವಾನ್ ವೇದವ್ಯಾಸ ಪುರಾಣಿಕ್ ರವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ವಲಯ ಬ್ರಾಹ್ಮಣ ಸಭಾ ಅಧ್ಯಕ್ಷ ವಿಶ್ವನಾಥ ಬಾಯರಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply