ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಬಸವಾಭಿನಂದನೆ

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ,ಬಸವ ಸಮಿತಿ ಉಡುಪಿ ಜಿಲ್ಲೆ, ಇವರ ಸಹಯೋಗದಲ್ಲಿ ಇಂದು ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂಬ ಘೋಷ ವಾಕ್ಯದೊಂದಿಗೆ ಭಾವಚಿತ್ರವನ್ನು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಸವ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಶ್ರೀಮತಿ ವಿದ್ಯಾಕುಮಾರಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಾಜು ಮೊಗವೀರ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಬಸವ ಸಮಿತಿಯ ಡಾ. ಚಂದ್ರಶೇಖರ್, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ,ಗಂಗಾಧರ, ನಿರಂಜನ ಮೂರ್ತಿ, ಗಿರೀಶ್ ಪಾಂಗಳ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply