ಸಭೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ದೇಶದ ದೊಡ್ಡ ಬಂಡವಾಳಗಾರರಿಗೆ ದೇಶದ ಜನರ ಸಂಪತ್ತನ್ನು ಮಾರಾಟ ಮಾಡುವುದು ಬಿಜೆಪಿ ಪಕ್ಷದ ದೇಶಭಕ್ತಿ ಎಂಬುವುದು ಸಾಬೀತಾಗಿದೆ. ಇಂತಹ ದೇಶಭಕ್ತಿಯು ರೈತರು, ಕಾರ್ಮಿಕರು, ಕೂಲಿಕಾರರಿಗೆ ಬಹುದೊಡ್ಡ ಅಪಾಯ ತರಲಿದೆ. ಬಿಜೆಪಿಯ ಬಂಡವಾಳಗಾರರ ಪರವಾದ ಇಂತಹ ರಾಷ್ಟ್ರೀಯವಾದ ಒಪ್ಪಲು ಸಾಧ್ಯವಿಲ್ಲ ಎಂದು ದೂರಿದರು.
ಸಣ್ಣ ಕೈಗಾರಿಕೆಗಳು ನಾಶವಾಗುತ್ತಿದ್ದು, ನಿರುದ್ಯೋಗ ಉಲ್ಬಣಗೊಂಡು ಜಿಡಿಪಿ ಕುಸಿಯುತ್ತಿದೆ. ಜನರ ಆದಾಯ ಸ್ಥಗಿತಗೊಂಡಿದೆ. ರೈತ ವಿರೋಧಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆಗಳು ಜನರಿಗೆ ಮತ್ತಷ್ಟು ಸಂಕಷ್ಟ ತರಲಿದೆ. ಇಂತಹ ನೀತಿಗಳ ವಿರುದ್ದ ದಹಲಿ ರೈತರು ಹೋರಾಟ ನಡೆಸುತ್ತಿದ್ದಾರೆ ಸರಕಾರ ಕೂಡಲೇ ಅವರ ಮೇಲೆ ದಾಖಲಿಸಿರುವ ಕೇಸುಗಳನ್ನು ವಾಪಾಸ್ಸು ಪಡೆಯಬೇಕು. ಕಾರ್ಪೋರೇಟ್ ಪರ ನೀತಿ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸಿಐಟಿಯು ಮುಖಂಡರಾದ ಕೆ.ಶಂಕರ್, ಎಚ್.ನರಸಿಂಹ, ಶಶಿಧರ ಗೊಲ್ಲ, ಮಹಾಬಲ ವಡೇರಹೋಬಳಿ, ಬಲ್ಕೀಸ್, ಕೃಷಿ ಕೂಲಿಕಾರರ ಸಂಘದ ವೆಂಕಟೇಶ್ ಕೋಣಿ ಮೊದಲಾದವರು ಉಪಸ್ಥಿತರಿದ್ದರು.