Janardhan Kodavoor/ Team KaravaliXpress
27.6 C
Udupi
Tuesday, December 6, 2022
Sathyanatha Stores Brahmavara

​​ಉಚಿತ ಕಣ್ಣಿನ ತಪಾಸಣಾ ಶಿಬಿರ 

ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ, ಪ್ರಸಾದ್ ನೇತ್ರಾಲಯ ಮತ್ತು ನೇತ್ರ ಜ್ಯೋತಿ ಟ್ರಸ್ಟ್ ಉಡುಪಿ ಇದರ ಸಹಭಾಗಿತ್ವದಲ್ಲಿ  ಪ್ರಧಾನಿ ನರೇಂದ್ರ ಮೋದಿಜೀಯವರ 70ನೇ ಜನ್ಮ ದಿನದ ಸೇವಾ ಸಪ್ತಾಹದ ಅಂಗವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ನಡೆಸಲಾಯಿತು. ಸುಮಾರು 400 ರಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಇದರ ಸದುಪಯೋಗವನ್ನು ಪಡೆದರು.ಈ ಸಂದರ್ಭದಲ್ಲಿ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ವೀಣಾ. ಎಸ್. ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪ್ರಸಾದ್ ನೇತ್ರಾಲಯ ತಜ್ಞ ವೈದ್ಯ ಡಾ. ಕೃಷ ಪ್ರಸಾದ್, ಮಟ್ಟಾರ್ ರತ್ನಾಕರ್ ಹೆಗ್ಡೆ, ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಮಹಿಳಾ ಉಸ್ತುವಾರಿ ಗೀತಾಂಜಲಿ ಸುವರ್ಣ, ಉದಯ ಕುಮಾರ್ ಶೆಟ್ಟಿ , ಶೀಲಾ.ಕೆ. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ ಮತ್ತು ಪ್ರಮೀಳಾ ಹರೀಶ್, ಆರು ಮಂಡಲಗಳ ಮಹಿಳಾ ಮೋರ್ಚಾ ಅಧ್ಯಕ್ಷರುಗಳು, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!