ಮಾನವ ಬಂಧುತ್ವ ವೇದಿಕೆ: ಮೀನು ಮಾರಾಟ ಮಾಡುವ ಮಹಿಳೆಯರಿಗೆ ಸನ್ಮಾನ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಉಡುಪಿ ಜಿಲ್ಲಾ ಸಂಚಲನ ಸಮಿತಿ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಕಾಪು ಮೀನು ಮಾರುಕಟ್ಟೆಯಲ್ಲಿರುವ ಶ್ರಮಜೀವಿ ಮೀನು ಮಾರಾಟ ಮಾಡುವ ಮಹಿಳೆಯರಿಗೆ ಅಭಿನಂದಿಸಿ, ಸನ್ಮಾನಿಸಲಾಯಿತು.

ಮಾನವ ಬಂದುತ್ವ ವೇದಿಕೆ ಕರ್ನಾಟಕ ಇದರ ಮಂಗಳೂರು ವಿಭಾಗದ ಸಂಚಾಲಕ, ಪತ್ರಕರ್ತ ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಮೀನುಗಾರರ ಮತ್ತು ಮೀನುಗಾರರ ಮಹಿಳೆಯರ ಉದ್ಯಮದ ಕಷ್ಟಗಳನ್ನು ಸ್ಮರಿಸಿಕೊಂಡರು. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಜೀವನ ನಡೆಸುವುದೇ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಶ್ರಮಿಕ ಮೀನುಗಾರಿಕಾ ಮಹಿಳೆಯರನ್ನು ಗುರುತಿಸಿ ಗೌರವಿಸಿದ್ದು ಮೆಚ್ಚುವಂಥದ್ದು ಎಂದರು.

ಮಾನವ ಬಂದುತ್ವ ವೇದಿಕೆ ಕರ್ನಾಟಕ ಇದರ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಹಾಜರಿದ್ದ ಎಲ್ಲಾ ಮೀನುಗಾರ ಮಹಿಳೆಯರಿಗೆ ಶಾಲು ಹೊದಿಸಿ ಗೌರವಿಸಲಾಯಿತು ಮತ್ತು ಒಳ್ಳೆಯ ಗುಣಮಟ್ಟದ ಹಣ್ಣಿನ ಗಿಡವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಾನವ ಬಂಧುತ್ವ ಕರ್ನಾಟಕ ವೇದಿಕೆ ಇದರ ರಾಜ್ಯ ಸಮಿತಿ ಸದಸ್ಯ ರೋನಾಲ್ಡ್ ಮನೋಹರ್ ಕರ್ಕಡ, ಪ್ರಮುಖರಾದ ಮಂಜಿತ್ ನಾಗರಾಜ್, ಮಹಮದ್ ಶೀಶ್, ಅಶ್ವಿನಿ, ಚಾಲ್ಸ್ ಅಂಬ್ಲರ್, ಕಾಪು ಮೀನು ಮಾರಾಟ ಸಂಘದ ಅಧ್ಯಕ್ಷ ಶಾಂತ ಸುವರ್ಣ, ಕಾರ್ಯದರ್ಶಿ ಶಶಿಕಲಾ, ಕಾಪು ಪುರಸಭಾ ಸದಸ್ಯರಾದ ಸತೀಶ್ ಚಂದ್ರ, ಫರ್ಜಾನ, ಶೋಭಾ ಬಂಗೇರ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪ್ರಮುಖರಾದ ಎಂಎ ಗಪುರ್, ಉಸ್ಮಾನ್, ಫಾರೂಕ್ ಚಂದ್ರನಗರ, ಹರೀಶ್ ನಾಯಕ್, ದೀಪಕ್ ಕುಮಾರ್ ಎರ್ಮಳ್, ಜಹೀರ್ ಅಹ್ಮದ್, ಸರ್ಫುದ್ದೀನ್ ಶೇಕ್ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply