‘ಸಾಮಾಜಿಕ ಕಳಕಳಿಯಿಂದ ಪರಿವರ್ತನೆ ಸಾಧ್ಯ’~ನಾಗೇಶ್ ಎನ್.ಪಿ

ಪ್ರಜ್ಞಾವಂತ ನಾಗರಿಕನಾಗಿ ಸಮಾಜಕ್ಕೆ ಯಾವ ರೀತಿಯ ಕೊಡುಗೆ ನೀಡಬಹುದು ಎಂಬ ಉತ್ತಮ ಚಿಂತನೆಯೊಂದಿಗೆ ಸಾಮೂಹಿಕವಾಗಿ ಪರಿಸರ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಾಗ ಸಾಮಾಜಿಕ ಪರಿವರ್ತನೆ ಸಾಧ್ಯ ಎಂದು ಜನ ಜಾಗೃತಿ ವೇದಿಕೆಯ ಕರಾವಳಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ನಾಗೇಶ್ ಎನ್.ಪಿ. ಹೇಳಿದರು.

ಅವರು ಜಿಲ್ಲಾ ಜನ ಜಾಗೃತಿ ವೇದಿಕೆಯ ಉಡುಪಿ ವಲಯದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಉದ್ಯಾವರ ಕೇದಾರ್ ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶೇಖರ್ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘಗಳ ಸದಸ್ಯರನ್ನುದ್ದೇಶಿಸಿ ಮಾತನಾಡಿದರು.

ಗಾಂಧಿ ಜಯಂತಿಯ ದಿನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.), ಜನ ಜಾಗೃತಿ ವೇದಿಕೆಯ ವತಿಯಿಂದ ನವ ಜೀವನ ಸಮಿತಿಯ ದಿನವಾಗಿ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಆಚರಿಸಲಾಗುತ್ತಿದೆ. ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತಿç ಯವರಂತಹ ಮಹಾನ್ ವ್ಯಕ್ತಿಗಳ ಜೀವನಾದರ್ಶ ಮತ್ತು ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಾವಿರಕ್ಕೂ ಮಿಕ್ಕಿ ಸ್ವಚ್ಛತಾ ಕಾರ್ಯಕ್ರಮಗಳು ನಡೆಯುತ್ತಿರುವುದು ಜನತೆಯಲ್ಲಿ ಸ್ವಚ್ಛತೆಯ ಬಗ್ಗೆ ಮೂಡಿರುವ ಅರಿವಿಗೆ ಜ್ವಲಂತ ಸಾಕ್ಷಿ ಯಾಗಿದೆ ಎಂದರು.

ಸ್ವಚ್ಛತಾ ಕಾರ್ಯುಕ್ರಮವನ್ನು ಜನ ಜಾಗೃತಿ ವೇದಿಕೆಯ ಉಡುಪಿ ವಲಯಾಧ್ಯಕ್ಷ ಗಣೇಶ್ ಕುಮಾರ್ ಸಂಪಿಗೆನಗರ ಉದ್ಘಾಟಿಸಿದರು. ಜನ ಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಹಾಗೂ ನಿಕಟಪೂರ್ವ ವಲಯಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಉಡುಪಿ ವಲಯ ಉಪಾಧ್ಯಕ್ಷ ಪ್ರತಾಪ್ ಕುಮಾರ್ ಉದ್ಯಾವರ, ದೇವಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷ ಪುರಂದರ ಪೂಜಾರಿ, ಉದ್ಯಾವರ ಒಕ್ಕೂಟದ ಅಧ್ಯಕ್ಷೆ ಕುಮುದಾ ಮತ್ತು ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಗೀತಾ ಸ್ವಾಗತಿಸಿ, ಉಡುಪಿ ವಲಯ ಮೇಲ್ವಿಚಾರಕ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು. ಸ್ವಸಹಾಯ ಸಂಘದ ಸದಸ್ಯೆ ಮಾಲತಿ ವಂದಿಸಿದರು.

 
 
 
 
 
 
 
 
 
 
 

Leave a Reply