‘ಇಂಚರ’ ಅಧ್ಯಕ್ಷರಾಗಿ ಗೀತಾ ವಾಗ್ಲೆ 

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಪು ತಾಲೂಕಿನ ಸಂಜೀವಿನಿ ಒಕ್ಕೂಟಗಳನ್ನೊಳಗೊಂಡ “ಇಂಚರ” ಕಾಪು ತಾಲೂಕು ಸಂಜೀವಿನಿ ಒಕ್ಕೂಟದ ಪ್ರಥಮ ಅಧ್ಯಕ್ಷರಾಗಿ ಶ್ರೀಮತಿ ಗೀತಾ ವಾಗ್ಳೆ ಅವರು ಆಯ್ಕೆಯಾಗಿದ್ದಾರೆ.ಇಂದು ಕಾಪು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಶಿರ್ವ ಗ್ರಾಮದ ಶೃಂಗಾರ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಗೀತಾ ವಾಗ್ಳೆ ಅವರು ಹಲವಾರು ಸಾಮಾಜಿಕ ಸಂಘಟನೆಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪ್ರತಿಷ್ಠಿತ ಶಿರ್ವ ಮಹಿಳಾ ಮಂಡಲದ ಅಧ್ಯಕ್ಷೆಯಾಗಿ, ಬಂಟಕಲ್ಲು ಶ್ರೀ ದುರ್ಗಾ ಮಹಿಳಾ ಚೆಂಡೆ ಬಳಗದ ಅಧ್ಯಕ್ಷೆಯಾಗಿ,ಪಡುಬೆಳ್ಳೆ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಯ ಸದಸ್ಯೆಯಾಗಿ,ಕಾಪು ತಾಲೂಕು ಪಂಚಾಯತ್ ನ ಮಾಜಿ ಸದಸ್ಯೆಯಾಗಿ ಕಾರ್ಯನಿರ್ವಹಿಸಿರುತ್ತಾರೆ.

Leave a Reply