ಪೆರಂಪಳ್ಳಿ: ಉಚಿತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ

ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ, ಕೆಥೋಲಿಕ್ ಸಭಾ ಪೆರಂಪಳ್ಳಿ ಘಟಕ, ಸಮುದಾಯ ವೈದ್ಯಕೀಯ ವಿಭಾಗ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಣಿಪಾಲ ಇವರ ಸಹಯೋಗದೊಂದಿಗೆ ಪೆರಂಪಳ್ಳಿ ಫಾತಿಮಾ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ ಭಾನುವಾರ ನಡೆಯಿತು.

ಶಿಬಿರವನ್ನು ಧರ್ಮಗುರುಗಳಾದ ಅನಿಲ್ ಡಿಸೋಜಾ ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಥೋಲಿಕ್ ಸಭಾದ ಅಧ್ಯಕ್ಷ ಫೆಲಿಕ್ಸ್ ಡಿಸೋಜಾ, ನಿಕಟಪೂರ್ವ ಅಧ್ಯಕ್ಷ ಒಲಿವೆರಾ ಡಿಸೋಜ, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಾಮಿನಿ ಕುಮಾರ್, ಸಮುದಾಯ ವೈದ್ಯಕೀಯ ವಿಭಾಗದ ಡಾ.ಜೆನ್ನಿಫರ್, ಮಣಿಪಾಲ ದಂತ ವಿಶ್ವವಿದ್ಯಾಲಯದ ಡಾ.ನಿಶು ಉಪಸ್ಥಿತರಿದ್ದರು.

ಕಸ್ತೂರ್ಬಾ ಆಸ್ಪತ್ರೆಯ ವಿವಿಧ ವಿಭಾಗದ 10 ವೈದ್ಯರು ಮಧುಮೇಹ ತಪಾಸಣೆ, ಚರ್ಮರೋಗ ತಪಾಸಣೆ, ಕಣ್ಣಿನ ತಪಾಸಣೆ, ಸ್ತ್ರೀ ರೋಗ ತಪಾಸಣೆ, ಮಕ್ಕಳ ತಪಾಸಣೆ, ಹಾಗೂ ರಕ್ತ ಪರೀಕ್ಷೆ ನಡೆಸಿದರು. 136 ಜನ ಈ ಶಿಬಿರದ ಪ್ರಯೋಜನ ಪಡೆದುಕೊಂಡರು.

ಕೆಥೋಲಿಕ್ ಸಭಾದ ಕಾರ್ಯದರ್ಶಿ ಅನಿತಾ ಡಿಸೋಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 
 
 
 
 
 
 
 
 
 
 

Leave a Reply