‘ಮಳೆ ನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಮತ್ತು ನವೀಕರಿಸಬಹುದಾದ ಇಂಧನ’:ಮಾಹಿತಿ ಕಾರ್ಯಾಗಾರ

ಉಡುಪಿ: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಮಹಾತ್ಮಾಗಾಂಧಿ ಗ್ರಾಮೀಣ ಇಂಧನ ಅಭಿವೃದ್ಧಿ ಸಂಸ್ಥೆ ಬೆಂಗಳೂರಿನ ಪ್ರಾಯೋಜಕತ್ವದಲ್ಲಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರ ಸಹಭಾಗಿತ್ವದಲ್ಲಿ ‘ಮಳೆ ನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಮತ್ತು ನವೀಕರಿಸಬಹುದಾದ ಇಂಧನ’ ವಿಷಯದಲ್ಲಿ ಮಾಹಿತಿ ಕಾರ್ಯಾಗಾರ ಸ್ತ್ರೀ ಶಕ್ತಿ ಸಂಘದ ಸದಸ್ಯೆಯರಿಗಾಗಿ ನಡೆಯಿತು.   

ಹೊಂಬಾಡಿ ಮಂಡಾಡಿ ಗ್ರಾಮ ಹುಣಸೆಮಕ್ಕಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಸಮಾರಂಭವನ್ನು ಉದ್ಘಾಟಿಸಿದ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಕಾಂತ್ ಮಾತನಾಡಿ, ಮಳೆ ನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಪ್ರತೀ ವ್ಯಕ್ತಿಗೂ ಮನೆಗಳಿಗೂ ಅನಿವಾರ್ಯ. ಸಸ್ಯ ಸಂಪತ್ತಿನ ನಾಶದಿಂದಾಗಿ ಜಾಗತಿಕ ತಾಪಮಾನ ಏರಿಕೆಯ ಅನುಭವ ಈ ಬೇಸಿಗೆಯಲ್ಲಿ ಎಲ್ಲರಿಗೂ ಅನುಭವವಾಗುತ್ತಿದೆ ಎಂದು ತಿಳಿಸಿದರು. ಗ್ರಾಮಗಳಲ್ಲಿ ಮಹಿಳೆಯರು ಕುಡಿಯವ ನೀರಿನ ಸದ್ಬಳಕೆ ಮತ್ತು ಪ್ಲಾಸ್ಟಿಕ್ ಕಸ ನಿರ್ವಹಣೆಯಲ್ಲಿ ಮುತುವರ್ಜಿ ವಹಿಸಬೇಕು ಎಂದರು.   

ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ರೆಬೆಲ್ಲೋ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅವಿನಾಶ್, ಭಾರತೀಯ ವಿಕಾಸ ಟ್ರಸ್ಟಿನ ಅಧಿಕಾರಿ ಜೀವನ್ ಕೊಲ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಾರತೀಯ ವಿಕಾಸ ಟ್ರಸ್ಟಿನ ಯೋಜನಾ ವ್ಯವಸ್ಥಾಪಕ ಅರುಣ್ ಪಟವರ್ಧನ್ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ಥಾವನೆಗೈದರು. ಮಾಹಿತಿ ಕಾರ್ಯಕ್ರಮದಲ್ಲಿ ಜೋಸೆಫ್ ರೆಬೆಲ್ಲೋ ಜಲಸಾಕ್ಷರತೆ ಮತ್ತು ಮಳೆ ನೀರು ಕೊಯ್ಲು ಬಗ್ಗೆ, ಜೀವನ್ ಘನತ್ಯಾಜ್ಯ ನಿರ್ವಹಣೆ ಮತ್ತು ಸೆಲ್ಕೋ ಕುಂದಾಪುರ ಶಾಖೆಯ ಸಿಬ್ಬಂದಿ ಸಂತೋಷ್ ಕುಲಾಲ್ ಸೌರ ಶಕ್ತಿ, ನವೀಕರಿಸಬಹುದಾದ ಇಂಧನ ವಿಷಯದಲ್ಲಿ ಮಾಹಿತಿ ನೀಡಿದರು. ಬಿವಿಟಿ ಸಿಬ್ಬಂದಿ ಸುರೇಶ್ ಕುಲಾಲ್ ಸಹಕರಿಸಿದರು.

 
 
 
 
 
 
 
 
 

Leave a Reply