Janardhan Kodavoor/ Team KaravaliXpress
26 C
Udupi
Monday, May 17, 2021

ವೈಜ್ಞಾನಿಕ ಕೃಷಿಯ ಬಗ್ಗೆ ಅರಿತುಕೊಂಡು ಮುನ್ನಡೆಯ ಬೇಕು~ರಾಮಕೃಷ್ಣ ಶರ್ಮ ಬಂಟಕಲ್ಲು

ಕಾಪು: ವೈಜ್ಞಾನಿಕತೆ ಯೊಂದಿಗೆ ಸಾಂಪ್ರಧಾಯಿಕತೆಯನ್ನು ಬಳಸಿಕೊಂಡು ನಡೆಸುವ ಕೃಷಿಯಿಂದ ಮನುಷ್ಯ ತನ್ನ ಬದುಕನ್ನು ಕಟ್ಟಿಕೊಳ್ಳಬಹುದು.

ವೈಜ್ಞಾನಿಕತೆ ಎಂದರೆ ರಾಸಾಯನಿಕ ಗೊಬ್ಬರ ಬಳಕೆ, ಯಂತ್ರಗಳ ಬಳಕೆಯಲ್ಲ. ಬದಲಾಗಿಗೆ ಗಿಡಕ್ಕೆ ಏನು ಬೇಕೋ ಅದನ್ನು ನೀಡಬೇಕು. ಆ ಮೂಲಕ ವೈಜ್ಞಾನಿಕ ಕೃಷಿಯನ್ನು ಲಾಭದಾಯಕ ವನ್ನಾಗಿಕೊಳ್ಳಲು ಸಾಧ್ಯವಿದೆ.
ಅವೈಜ್ಞಾನಿಕತೆ ಮಾದರಿಯ ಕೃಷಿಯಿಂದ ನಷ್ಟದ ಜೊತೆಗೆ ಅನಾರೋಗ್ಯವನ್ನೂ ಆಹ್ವಾನಿಸಿ ಕೊಂಡಂತಾಗುತ್ತದೆ. ಕೃಷಿಕರ ಬದುಕು ಹಸನಾಗಬೇಕಾದರೆ ಕೃಷಿಯಲ್ಲಿ ಯಾವುದೇ ತಪ್ಪುಗಳನ್ನು ಮಾಡದೇ, ವೈಜ್ಞಾನಿಕ ಕೃಷಿಯ ಬಗ್ಗೆ ಅರಿತುಕೊಂಡು ಮುನ್ನಡೆಯಬೇಕು ಎಂದು ಉಡುಪಿ ಜಿಲ್ಲಾ ಕೃಷಿಕರ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಹೇಳಿದರು.

ಕಾಪು ಜೇಸಿಐ, ಜೇಸಿರೆಟ್ ವಿಭಾಗದ ಮಹಿಳಾ ಉತ್ಸವ್ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾ ಕೃಷಿಕ ಸಂಘ ಮತ್ತು ಕೃಷಿಯಾಸಕ್ತರ ಬಳಗವು ಇನ್ನಂಜೆಯಲ್ಲಿ ಶನಿವಾರ ಏರ್ಪಡಿಸಿದ್ದ ಕೃಷಿ ಮಾಹಿತಿ ಕಾರ್ಯಕ್ರಮ, ನೇರ ತರಕಾರಿ ಮಾರಾಟ ಮೇಳ ಮತ್ತು ಪ್ರಗತಿಪರ ಕೃಷಿಕರಿಗೆ ಸಮ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ಪ್ರತೀ ವರ್ಷ ಸುಮಾರು 150ಕ್ಕೂ ಅಧಿಕ  ಮಾಹಿತಿ ಶಿಬಿರಗಳನ್ನು ಆಯೋಜಿಸುವ ಮೂಲಕ ಕೃಷಿಯತ್ತ ಜನರನ್ನು ಸೆಳೆಯುವುದರ ಜೊತೆಗೆ, ಕೃಷಿ ಯನ್ನು ಲಾಭದಾಯಕವನ್ನಾಗಿಸುವುದರ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಕೃಷಿಕರನ್ನು ಆರ್ಥಿಕ ಸಬಲರನ್ನಾಗಿಸುವ ಪ್ರಯತ್ನ ನಿರಂತರವಾಗಿ ನಡೆಯಬೇಕಿದ್ದು ಅದಕ್ಕೆ ಸಂಘ ಸಂಸ್ಥೆಗಳ ಪೂರ್ಣ ಸಹಕಾರದ ಅಗತ್ಯತೆಯಿದೆ ಎಂದರು.ಇನ್ನಂಜೆ ಗ್ರಾ. ಪಂ. ಅಧ್ಯಕ್ಷ ಮಲ್ಲಿಕಾ ಆಚಾರ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಪ್ರಗತಿಪರ ಕೃಷಿಕ ಗೋಪಾಲ ಕುಂದರ್ ಮಜೂರು ತರಕಾರಿ ಕೃಷಿ ಸಹಿತವಾಗಿ ವಿವಿಧ ವಾಣಿಜ್ಯ ಬೆಳೆಗಳನ್ನು ಹೇಗೆ ಲಾಭದಾಯಕ ವಾಗಿಸಿ ಕೊಳ್ಳಬಹುದು ಮತ್ತು ಯಾವ ಋತುಗಳಲ್ಲಿ ಯಾವ್ಯಾವ ತರಕಾರಿಗಳನ್ನು ಬೆಳೆಯ ಬಹುದು ಎನ್ನುವುದರ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಇನ್ನಂಜೆಯ ಹಿರಿಯ ಪ್ರಗತಿಪರ ಕೃಷಿಕೆ ಮುತ್ತು ಮೂಲ್ಯದಿ ಅವರನ್ನು ಸಮ್ಮಾನಿಸಿ, ಗೌರವಿಸ ಲಾಯಿತು. ಪ್ರಗತಿಪರ ಕೃಷಿಕ ಉದಯ್ ಜಿ., ಕಾಪು ಜೇಸಿಐ ನಿಕಟಪೂರ್ವ ಅಧ್ಯಕ್ಷ ವಿನೋದ್ ಕಾಂಚನ್, ಜೇಸಿರೆಟ್ ಅಧ್ಯಕ್ಷ ಗಾಯಾತ್ರಿ ಜಿ. ಆಚಾರ್ಯ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಪು ಜೇಸಿಐ ಅಧ್ಯಕ್ಷೆ ಅರುಣಾ ಐತಾಳ್ ಸ್ವಾಗತಿಸಿದರು. ಕಾರ್ಯದರ್ಶಿ ಶ್ರುತಿ ಎಸ್. ಶೆಟ್ಟಿ ವಂದಿಸಿದರು. 

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಭೇಟಿ 

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಶನಿವಾರದಂದು ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪರಿಸರಕ್ಕೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.  ಹಾನಿಗೊಳಗಾದ ಪ್ರದೇಶದ ಕುರಿತು...

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...
error: Content is protected !!