ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಲೀಲಾಧರ ಎ. ಶೆಟ್ಟಿ ಕಾಪು ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಸಭೆಯಲ್ಲಿ ಎಲ್ಲಾ ಕಲಾವಿದರು ಭಾಗಿಯಾಗಿದ್ದು, ಮುಂದಿನ ದಿನಗಳಲ್ಲಿ ನಾಟಕ ಕಲಾವಿದರಿಗೆ, ನಾಟಕ ಸಂಸ್ಥೆಗಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ನೂತನ ಘಟಕ ಪ್ರಾರಂಭಗೊಂಡಿತು.
ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ ಇದರ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಶ್ರೀ ಲೀಲಾಧರ ಶೆಟ್ಟಿ ಕಾಪು, ಉಪಾಧ್ಯಕ್ಷರಾಗಿ ಶ್ರೀ ಚಂದ್ರಹಾಸ ಸುವರ್ಣ
ಕಾರ್ಕಳ, ಲೀಲಾವತಿ ಪೊಸಲಾಯಿ, ಕಾರ್ತಿಕ್ ಕಡೆಕಾರು, ಪ್ರಧಾನ ಕಾರ್ಯದರ್ಶಿಯಾಗಿ ಪೆರ್ಡೂರು ಪ್ರಭಾಕರ ಕಲ್ಯಾಣಿ, ಜೊತೆ ಕಾರ್ಯದರ್ಶಿಯಾಗಿ ರವಿಕುಮಾರ್ ಕಡೆಕಾರ್, ಕೋಶಾಧಿಕಾರಿಯಾಗಿ ಶರತ್ ಉಚ್ಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ 15 ಮಂದಿಯನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.