ಕೆಮ್ಮಣ್ಣು ಭಾಗದಲ್ಲಿ ಹಡಿಲು ಭೂಮಿ ಕೃಷಿ ಚಟುವಟಿಕೆಯನ್ನು ವೀಕ್ಷಿಸಿದ ಶಾಸಕ ರಘುಪತಿ ಭಟ್

ಉಡುಪಿ: ಜಿಲೆಯಲ್ಲಿ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಡಿಲು ಕೃಷಿ ಭೂಮಿ ಕೃಷಿ ಚಟುವಟಿಕೆಗಳನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ಈ ಭಾಗದಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ 15 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಕೃಷಿಭೂಮಿ ಸುತ್ತಮುತ್ತಲಿನ ತೋಡುಗಳನ್ನು ಅಭಿವೃದ್ಧಿಗೊಳಿಸುವ ಕಾರ್ಯ ನಡೆಯುತ್ತಿದ್ದು, ಕೃಷಿ ಚಟುವಟಿಕೆಗಳು ಆರಂಭಗೊಂಡಿದೆ. ಊರಿನ ಹಿರಿಯರು, ಭೂ ಮಾಲಕರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ದನಕರ್ ಬಾಬು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ಗಣಪತಿ ವ್ಯವಸಾಯ ಸಹಕಾರಿ ಸಂಘ ಅಧ್ಯಕ್ಷ ಸತೀಶ್ ಶೆಟ್ಟಿ, ಕೆಮ್ಮಣ್ಣು ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ್, ಪುರಂದರ, ಸಂಧ್ಯಾ, ಮಾಜಿ ಸದಸ್ಯ ವೆಂಕಟೇಶ್ ಕುಂದರ್, ರವೀಂದ್ರ ಶ್ರೀಯಾನ್ ಹಾಗೂ ಸ್ಥಳೀಯ ಕೃಷಿಕರು, ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply