ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಅಭಿನಂದನೆ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಗೆ ಮಂಗಳೂರು ನಗರದ ದೇರೆಬೈಲು ಬಳಿ ಸರಕಾರಿ ಜಾಗದಲ್ಲಿ ಉಚಿತ ನಿವೇಶನ, ಕೊಂಕಣಿ ಭವನ ನಿರ್ಮಾಣಕ್ಕಾಗಿ ರೂಪಾಯಿ 5 ಕೋಟಿ ಅನುದಾನ, ಮತ್ತು ಕೊಂಕಣಿ ಅಕಾಡೆಮಿಯ ಎಲ್ಲಾ ಕಾರ್ಯಯೋಜನೆಗಳಿಗೆ ವಿಶೇಷ ಸಹಕಾರ, ಪ್ರೋತ್ಸಾಹ ನೀಡುತ್ತಿರುವ ಹಿನ್ನೆಲೆ ಅನೇಕ ಗಣ್ಯರಿಗೆ ಇಂದು ಅಭಿನಂದಿಸಲಾಯಿತು.

ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಗೆ, ಮಂಗಳೂರು ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ, ಮಂಗಳೂರಿನ ಶಾಸಕ ಶ್ರೀ ವೇದವ್ಯಾಸ ಕಾಮತ್ ರವರಿಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಜಗದೀಶ್ ಪೈಯವರು ಮಂಗಳವಾರ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಅಭಿನಂದಿಸಿ, ಸನ್ಮಾನಿಸಿದರು.

ಅಕಾಡೆಮಿಯ ರಿಜಿಸ್ಟ್ರಾರ್ ಶ್ರೀ ಮನೋಹರ ಕಾಮತ್, ಸದಸ್ಯರುಗಳಾದ ಶ್ರೀ ಸಾಣೂರು ನರಸಿಂಹ ಕಾಮತ್, ಶ್ರೀಮತಿ ಪೂರ್ಣಿಮಾ ಸುರೇಶ್ ನಾಯಕ್, ಶ್ರೀ ಅರುಣ್ ಶೇಟ್ ಮತ್ತು ಕೆ ನ್ಯೂಟ್ ಜೀವನ್ ಪಿಂಟೋ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply