ಲಯನ್ಸ್ ಕ್ಲಬ್ ಮಣಿಪಾಲ ಇವರ ವತಿಯಿಂದ ಉಚಿತ ನೋಟ್ಸ್ ಪುಸ್ತಕ ವಿತರಣೆ

ಟಿ. ಎ. ಪೈ. ಮೋಡರ್ನ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ಮಣಿಪಾಲ ಇವರ ವತಿಯಿಂದ ಉಚಿತ ನೋಟ್ಸ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ ಮಣಿಪಾಲ ಇದರ ಅಧ್ಯಕ್ಷರಾದ ಡಾ। ಅರ್ಚನಾ ಭಟ್, ನಿಕಟಪೂರ್ವ ಅಧ್ಯಕ್ಷ  ಸುರೇಶ್ ಪ್ರಭು, ಸ್ಥಾಪಕ ಅಧ್ಯಕ್ಷ ಗಣೇಶ್ ಪೈ, ಶಾಲಾ ಸಂಚಾಲಕ ಹೆಚ್.ಆರ್. ಶೆಣೈ, ಶಾಲಾ ಟ್ರಸ್ಟಿ ರಮೇಶ್ ಕಿಣಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ಭಂಡಾರಿ , ಶಾಲಾ ಮುಖ್ಯ ಶಿಕ್ಷಕಿ ಸುಲೋಚನಾ ಟೀಚರ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಿಸಿ ಶುಭ ಹಾರೈಸಿದರು. ಶಿಕ್ಷಕಿ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು.
 
 
 
 
 
 
 
 
 
 
 

Leave a Reply