ಮಹಾಲಕ್ಷ್ಮೀ ಕೋ ಅಪರೇಟಿವ್ ಬ್ಯಾಂಕ್ ವ್ಯವಹಾರದ ಸಮಯ ಬದಲಾವಣೆ

ಉಡುಪಿ: ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿಮಹಾಲಕ್ಷ್ಮೀ ಕೋ ಅಪರೇಟಿವ್ ಬ್ಯಾಂಕ್ ತನ್ನ ಗ್ರಾಹಕರ ಅನುಕೂಲತೆಗಾಗಿ ತನ್ನ ಎಲ್ಲಾ ಶಾಖೆಗಳಲ್ಲಿ ವ್ಯವಹಾರ ಸಮಯವನ್ನು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 2.00 ಗಂಟೆ ವರೆಗೆ ನಿಗದಿಪಡಿಸಲಾಗಿದೆ.

ಗ್ರಾಹಕ ಸ್ನೇಹಿ ಬ್ಯಾಂಕಿಂಗ್ ಸೇವೆ ನೀಡುವ ಉದ್ದೇಶದಿಂದ ಬೆಳಿಗ್ಗೆ 8.30 ರಿಂದಲೇ ನಗದು ಪಾವತಿ ಮತ್ತು ಜಮೆ ಮಾಡಲು ಅವಕಾಶ ನೀಡಲಾಗಿದ್ದು ಕೊರೊನಾ ಕರ್ಫ್ಯೂ ಅವಧಿಯಲ್ಲಿ ಗ್ರಾಹಕರಿಗಾಗಿ ಈ ಬದಲಾವಣೆ ಮಾಡಲಾಗಿದೆ.

ವ್ಯವಹಾರದ ಸಮಯದ ಬದಲಾವಣೆಯ ಪ್ರಯೋಜನವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಬ್ಯಾಂಕಿನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply