ಮೋದಿ ಬ್ರಿಗೇಡ್ ಉಡುಪಿ ಜಿಲ್ಲೆ ವತಿಯಿಂದ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಮೋದಿ ಅವರ 72ನೇ ಹುಟ್ಟುಹಬ್ಬದ (17-09-2022) ಸಲುವಾಗಿ ಮೋದಿ ಬ್ರಿಗೇಡ್ ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ನೀಡಲಾಯಿತು ಮತ್ತು ಮೋದಿ ಯೋಜನೆ ಮನೆ ಮನೆಗೆ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ|ಸುಜಿತ್ ಮತ್ತು ಡಾ| ಸುಭಾಸ್ ಕಿಣಿ ಚಾಲನೆ ನೀಡಿದರು. ಜಿಲ್ಲಾಧ್ಯಕ್ಷರಾದ ಸುಭಾಷಿತ್ ಕುಮಾರ್, ಉಪಾಧ್ಯಕ್ಷರುಗಳಾದ ಚಿನ್ಮಯ ಮೂರ್ತಿ ಮತ್ತು ಚಂದ್ರಕಾಂತ್ ದೇವಾಡಿಗ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೇದಾವತಿ ಹೆಗ್ಡೆ, ಯುವ ಘಟಕದ ಅಧ್ಯಕ್ಷ ನಾಗರಾಜ್ ಶೇಟ್, ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply