ಮುಸ್ಲೀಮ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಕೋವಿಡ್ ಲಸಿಕಾ ಶಿಬಿರ

ಉಡುಪಿ : ಮುಸ್ಲೀಮ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಪ್ರಥಮ ಮತ್ತು ದ್ವಿತೀಯ ಕೋವಿಡ್ ಲಸಿಕಾ ಶಿಬಿರವನ್ನು ಉಡುಪಿಯ ಜಾಮೀಯ ಮಸೀದಿಯ ಕೆಳ ಅಂತಸ್ತಿನಲ್ಲಿ ಹಮ್ಮಿಕೊಳ್ಳಲಾಯಿತು. 

ಸುಮಾರು 378 ಮಂದಿ ಸ್ತ್ರೀ ಪುರುಷರು ಈ ಶಿಬಿರದಲ್ಲಿ ಭಾಗವಹಿಸಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಮುಸ್ಲೀಮ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಕಲ್ಯಾಣಪುರ್ ಗಫೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply