Janardhan Kodavoor/ Team KaravaliXpress
30.6 C
Udupi
Wednesday, August 17, 2022
Sathyanatha Stores Brahmavara

ಮುದ್ರಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ವತಿಯಿಂದ ಹಿರಿಯ ಮುದ್ರಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ಉಡುಪಿ ಪುರಭವನದಲ್ಲಿ ಜರಗಿತು.  ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಮ್ .ಮಹೇಶ್ ಕುಮಾರ್ ವಹಿಸಿದ್ದರು. 
ಮುಖ್ಯ ಅತಿಥಿಗಳಾಗಿ  ಉದಯವಾಣಿಯ ವಿಶ್ರಾಂತ ಉಪ ಸಂಪಾದ ನಿತ್ಯಾನಂದ ಪಡ್ರೆ ಮಣಿಪಾಲ ಹಾಗೂ ಮುದ್ರಕರ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷ ಬಿ ಜಿ ಸುಬ್ಬರಾವ್,  ಗೌರವ ಸಲಹೆಗಾರ ಅಶೋಕ್ ಶೆಟ್ಟಿ,  ಕಾರ್ಯದರ್ಶಿ ಮನೋಜ್ ಕಡಬ, ಕೋಶಾಧಿಕಾರಿ ಸುಧೀರ್ ಡಿ ಬಂಗೇರ ಉಪಸ್ಥಿತರಿದ್ದರು. 
3 ಜನ ಹಿರಿಯ ಮುದ್ರಕರನ್ನು ಗೌರವಿಸಲಾಯಿತು. ಹತ್ತನೇ ತರಗತಿ ಯಲ್ಲಿ ಹೆಚ್ಚು ಅಂಕ ಗಳಿಸಿದ 3 ಜನ ವಿದ್ಯಾರ್ಥಿಗಳನ್ನು ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ 6 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸಂಘ ಸಂಸ್ಥೆಯಲ್ಲಿ ಹುದ್ದೆ ಅಲಂಕರಿಸಿದ ವೃತ್ತಿ ಬಾಂಧವರನ್ನು ಗೌರವಿಸಲಾಯಿತು.  
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!