ಉಡುಪಿ ಪುತ್ತೂರು ಬಂಟರ ಸಂಘದ ವತಿಯಿಂದ ಗುರುವಂದನಾ ಕಾರ್ಯಕ್ರಮ  

 ಉಡುಪಿ ಪುತ್ತೂರು ಬಂಟರ ಸಂಘದ ವತಿಯಿಂದ ಶಿಕ್ಷಕ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಪುತ್ತೂರು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ರಾದ ನಿವೃತ್ತ ಪ್ರಾಂಶುಪಾಲ ಡಾ.ಬಾಲಕೃಷ್ಣ ಹೆಗ್ಡೆ, ಪ್ರೊ.ಡಾ. ಪ್ರಶಾಂತ್ ಶೆಟ್ಟಿ, ಶಿಕ್ಷಕಿಯರಾದ ಸುಲೋಚನಾ ಶೆಟ್ಟಿ, ಜಯಂತಿ ಶೆಟ್ಟಿ, ಉಷಾ ಶೆಟ್ಟಿ, ಸುನೀತಾ ಶೆಟ್ಟಿ, ಅವರುಗಳನ್ನು ಸಂಘದ ಅಧ್ಯಕ್ಷ ಶಂಕರ ಶೆಟ್ಟಿ ಪುತ್ತೂರು ಸನ್ಮಾನಿಸಿ ಗೌರವಿಸಿದರು.
ಮುಖ್ಯ ಅತಿಥಿ ನಿವೃತ್ತ ಪ್ರಾಂಶುಪಾಲ ಡಾ. ಬಾಲಕೃಷ್ಣ ಹೆಗ್ಡೆ ಮಾತನಾಡಿ, ಶಿಕ್ಷಕರು ಜೀವನದಲ್ಲಿ ಸಾಧನೆ ಮಾಡಿ ಆದರ್ಶವಾಗಿ ಬದುಕಬೇಕು ಎಂದರು. ಮಕ್ಕಳನ್ನು ಉತ್ತಮ ನಾಗರಿಕ ರನ್ನಾಗಿ ಪರಿವರ್ತನೆ ಮಾಡುವುದು ಶಿಕ್ಷಕರ ಆದ್ಯ ಕರ್ತವ್ಯ ಎಂದರು. ಪ್ರಶಾಂತ್ ಶೆಟ್ಟಿ ಮಾತನಾಡಿ ಶಿಕ್ಷಕರು ತನ್ನ ವೃತ್ತಿಯ ಬಗ್ಗೆ ಗೌರವದಿಂದ ನಡೆದು ಮಕ್ಕಳನ್ನು ಉತ್ತಮ ಪ್ರಜೆಯಾಗಿ ಬೆಳೆಸುವಲ್ಲಿ ಪ್ರಯತ್ನಿಸಬೇಕು ಎಂದರು.
ಸಂಘದ ಅಧ್ಯಕ್ಷ ಶಂಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಮನೋಹರ ಶೆಟ್ಟಿ,  ಕೋಶಾಧಿಕಾರಿ ಶ್ರೀಕಾಂತ್ ಶೆಟ್ಟಿ, ಮಾಧವ ಶೆಟ್ಟಿ ಪುತ್ತೂರು ಮತ್ತು ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಉಮೇಶ್ ಶೆಟ್ಟಿ ಸ್ವಾಗತಿಸಿ,  ವಿಠ್ಠಲ್ ಶೆಟ್ಟಿ ಪ್ರಾರ್ಥಿಸಿದರು . ಕಾರ್ಯದರ್ಶಿ ಈಶ್ವರ ಶೆಟ್ಟಿ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಸುಂದರ ಶೆಟ್ಟಿ ವಂದಿಸಿದರು.
 
 
 
 
 
 
 
 
 
 
 

Leave a Reply