Janardhan Kodavoor/ Team KaravaliXpress
30.6 C
Udupi
Sunday, October 2, 2022
Sathyanatha Stores Brahmavara

ಬ್ರಾಹ್ಮಣ ಮಹಾಸಭಾ (ರಿ.) ಪುತ್ತೂರು~ 18ನೇ ವಾರ್ಷಿಕೋತ್ಸವ

ಬ್ರಾಹ್ಮಣ ಮಹಾಸಭಾ (ರಿ.) ಪುತ್ತೂರು, ಉಡುಪಿ ಇದರ ೧೮ನೇ ವಾರ್ಷಿಕೋತ್ಸವವು ತಾ. 31.07.2022 ರಂದು ಪುತ್ತೂರು ದುರ್ಗಾಪರಮೇಶ್ವರೀ ದೇವಸ್ಥಾನದ ಭಗವತೀ ಸಭಾಗೃಹದಲ್ಲಿ ಸಂಜೆ 4.00 ರಿಂದ ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ನಡೆಯಲಿದೆ. 
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಬೆಂಗಳೂರು ಇದರ ಅಧ್ಯಕ್ಷರಾದ ಹೆಚ್.ಎಸ್. ಸಚ್ಚಿದಾನಂದಮೂರ್ತಿ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಎಂ. ಶಿವರಾಮ ಉಡುಪ ಸಾಲಿಗ್ರಾಮ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ವೈ. ಸುಧಾಕರ ಭಟ್, ಶಿಕ್ಷಣತಜ್ಞರಾದ ಡಾ. ಉಷಾ ಚಡಗ ಉಪಸ್ಥಿತರಿರಲಿದ್ದಾರೆ. 
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರದಿಂದ 2021-22ನೇ ಸಾಲಿನ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ನಡೆಯಲಿದೆ. ಎಂದು ಪುತ್ತೂರು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ದುರ್ಗಾಪ್ರಸಾದ್ ಭಾರ್ಗವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!