Janardhan Kodavoor/ Team KaravaliXpress
26 C
Udupi
Monday, May 17, 2021

ಮೂಡುಬೆಟ್ಟು ಡಾ. ಬಿ. ಆರ್. ಅಂಬೇಡ್ಕರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲ- ಸಹಾಯಧನ ವಿತರಣೆ

ಉಡುಪಿ: ಡಾ. ಬಿ .ಆರ್. ಅಂಬೇಡ್ಕರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲ ವತಿಯಿಂದ ಅನಾರೋಗ್ಯ ಪೀಡಿತರಾದ ಸಂಸ್ಥೆಯ ಸದಸ್ಯೆ  ಬೇಬಿ ಐತಪ್ಪ ಇವರಿಗೆ ಜಂಟಿ ಸಂಸ್ಥೆಯಿಂದ ರೂ. 5000 ವಿತರಿಸಲಾಯಿತು.

 ಒಂದು ವರ್ಷದ ಅವಧಿಯಲ್ಲಿ ಮದುವೆ, ಶಿಕ್ಷಣ ಹಾಗೂ ಅನಾರೋಗ್ಯಕ್ಕೆ ಒಳಗಾದ ಲಹರಿ, ಯಮುನಾ, ಪ್ರಮೀಳಾ ,ಕಮಲ ಮತ್ತು ಇತರ ಕಾರ್ಯಗಳಿಗೆ ಒಟ್ಟು ರೂ.35000 ವಿತರಿಸಲಾಗಿದೆ.ಮಹಿಳಾ ಮಂಡಲದ ಗೌರವಾಧ್ಯಕ್ಷೆ ಶ್ರೀಮತಿ ಟೀಚರ್, ಅಧ್ಯಕ್ಷೆ ಜಾನಕಿ, ಕಾರ್ಯದರ್ಶಿ ಸುಜಾತ, ಕೋಶಾಧಿಕಾರಿ ಶ್ರೀಲತಾ ಯುವಕ ಮಂಡಲದ ಉಪಾಧ್ಯಕ್ಷ ಸುಧಾಕರ, ಸದಸ್ಯರಾದ ಶ್ರೀಕಾಂತ್, ಶಿವಾನಂದ ಮೂಡುಬೆಟ್ಟು, ಮೋಹಿನಿ, ಯಮುನಾ ,ಶಾರದಾ ,ಶಾಂತ ಇವರೆಲ್ಲ ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಭೇಟಿ 

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಶನಿವಾರದಂದು ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪರಿಸರಕ್ಕೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.  ಹಾನಿಗೊಳಗಾದ ಪ್ರದೇಶದ ಕುರಿತು...

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...
error: Content is protected !!