ನಗರ ಮಹಿಳಾ ಮೊರ್ಚಾ ಹಮ್ಮಿಕೊಂಡ ಜನಸೇವಾ ಸಪ್ತಾಹ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಎಪ್ಪತ್ತನೇ  ಹುಟ್ಟು ಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡ ಜನಸೇವಾ ಸಪ್ತಾಹ ಕಾರ್ಯಕ್ರಮಗಳ ಅಂಗವಾಗಿ ಉಡುಪಿ ನಗರ ಮಹಿಳಾ ಮೊರ್ಚಾವು ಅದರ ಅಧ್ಯಕ್ಷೆ ಸರೋಜಾ ಶೆಟ್ಟಿಗಾರ್ ರವರ ನೇತೃತ್ವದಲ್ಲಿ ಕನ್ನರ್ಪಾಡಿ ಶ್ರೀ ಜಯದುರ್ಗ ದೇವಸ್ಥಾನದಲ್ಲಿ ದೇಶದ ಸುಭಿಕ್ಷೆಗಾಗಿ ಹೂವಿನ ಪೂಜೆಯನ್ನು ಆಯೋಜಿಸಿತು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರ ಪ್ರದಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ, ದಿನೇಶ್ ಅಮೀನ್, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದರು.

Leave a Reply