ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) ಇದರ ಕಾರ್ಯಕ್ಷೇತ್ರಕ್ಕೆ ಒಳಪಟ್ಟಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ವ್ಯಾಪ್ತಿಯ ಉಡುಪಿ, ಬ್ರಹ್ಮಾವರ, ಕಾಪು ತಾಲೂಕುಗಳನ್ನೊಳಗೊಂಡ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ 2023-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆಯಾಗಿದ್ದಾರೆ.

ಸತ್ಮಾನಂದ ನಾಯಕ್ ರವರು ಕಳೆದ 20 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪರ್ಕದಲ್ಲಿದ್ದು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ, ತಾಲೂಕು ಸಮಿತಿ ಸದಸ್ಯರಾಗಿ, ಜಿಲ್ಲಾ ಸಮಿತಿ
ಸದಸ್ಯರಾಗಿ ಯೋಜನೆಯ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯ ಸೇವೆ ಸಲ್ಲಿಸಿರುತ್ತಾರೆ.
ಉಡುಪಿ ತಾಲೂಕು ಪಂಚಾಯತ್ ಸದಸ್ಯರಾಗಿ, ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ಹಿರಿಯಡ್ಕ ಇದರ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ, ಆತ್ರಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಶ್ರೀ ಭವಾನಿ ಶಂಕರ ದೇವಸ್ಥಾನ ಭೈರಂಜೆ ಇದರ ಗೌರವಾಧ್ಯಕ್ಷರಾಗಿ, ಲಯನ್ಸ್ ಕ್ಲಬ್
ಹಿರಿಯಡ್ಕ ಇದರ ಅಧ್ಯಕ್ಷರಾಗಿ, ವಲಯಾಧ್ಯಕ್ಷರಾಗಿ, ಲಯನ್ಸ್ ಜಿಲ್ಲಾ ಸಂಪುಟ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸಕ್ತ ಆತ್ರಾಡಿ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ನಿರ್ಮಾಣ ವಿವಿಧೋದ್ದೇಶ
ಸಹಕಾರಿ ಸಂಘ ಉಡುಪಿ ಇದರ ನಿರ್ದೇಶಕರಾಗಿ, ವರ್ತಕರ ವೇದಿಕೆ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾಗಿ, ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜು ಇದರ ಅಭಿವೃದ್ಧಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ, ಅಮೋಘ(ರಿ.) ಹಿರಿಯಡ್ಕ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ಉಡುಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ, ಶ್ರೀ
ಭವಾನಿ ಶಂಕರ ದೇವಸ್ಥಾನ ಭೈರಂಜೆ ಇದರ ಆಡಳಿತ ಸಮಿತಿ ಸದಸ್ಯರಾಗಿ, ಆರ್.ಎಸ್.ಬಿ. ಸಂಘ ಮಣಿಪಾಲ ಇದರ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply