Janardhan Kodavoor/ Team KaravaliXpress
33 C
Udupi
Friday, February 26, 2021

​ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಸ್ಥಳೀಯ ಸಂಸ್ಥೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರ್ವಧರ್ಮ ಪ್ರಾರ್ಥನೆ

​ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಸ್ಥಳೀಯ ಸಂಸ್ಥೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಮಾಡಿ ಉಡುಪಿಯ ಅಜ್ಜರ ಕಾಡಿನಿಂದ ಸರ್ವಿಸ್ ಬಸ್ಟ್ಯಾಂಡಿನ ವರೆಗೆ ಶಾಂತಿ ಮೆರವಣಿಗೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಕೌಟ್ ಆಯುಕ್ತರಾದ ಡಾಕ್ಟರ್ ವಿಜಯೇಂದ್ರ ವಸಂತ ರಾವ್ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿರುವ ಪಿ.ಎಂ ವೇಣುಗೋಪಾಲ್ ಹೆಬ್ಬಾರ್ ಹಾಗೂ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾಗಿರುವ ಶ್ರೀ ಶೇಖರ್ ಪೂಜಾರಿ  ಹಾಗೂ ಕಾರ್ಯಕ್ರಮದಲ್ಲಿ ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆಗಿರುವಂತಹ ಶ್ರೀಮತಿ ಮಂಜುಳ ಉಪಸ್ಥಿತರಿದ್ದರು. 
ಜಿಲ್ಲಾ ಸಂಘಟಕರಾದ ಶ್ರೀಮತಿ ಸುಮನ್ ಎಸ್ ಮತ್ತು ಶ್ರೀ ನಿತಿನ್ ಅಮೀನ್  ಕಾರ್ಯಕ್ರಮ ಸಂಘಟಿಸಿದರು. ಉಡುಪಿಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಸಹ ಸ್ಥಾಪಕರ ದಿನಾಚರಣೆ ಹಾಗೂ ಚಿಂತನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಶಿಕ್ಷಕರು ಮಕ್ಕಳೊಂದಿಗೆ ನಡೆಸಿಕೊಟ್ಟರು
ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಹಾಗೂ  ಮಹತ್ವಪೂರ್ಣವಾಗಿ ಕಾರ್ಯಕ್ರಮವನ್ನು ತಮ್ಮ ತಮ್ಮ ಶಾಲೆಗಳಲ್ಲಿ ಕಾಲೇಜುಗಳಲ್ಲಿ ಆಯೋಜಿಸಿರುವ ಎಲ್ಲರಿಗೂ ಜಿಲ್ಲಾ ಮುಖ್ಯ ಆಯುಕ್ತರು ಹಾಗೂ ರಾಜ್ಯ ಮುಖ್ಯ ಆಯುಕ್ತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.  ​

​​

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...

ಹೆಸರಾಂತ ಆಯುರ್ವೇದ ವೈದ್ಯ ಜಿ. ಶ್ರೀನಿವಾಸ ಆಚಾರ್ಯ ನಿಧನ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ. ಜಿ. ಶ್ರೀನಿವಾಸ ಆಚಾರ್ಯ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ...
error: Content is protected !!