Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಗಿಡಮೂಲಿಕೆ ಮತ್ತು ಔಷಧೀಯ ಸಸಿಗಳನ್ನು ನೆಡುವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ, ವಕೀಲರ ಸಂಘ (ರಿ) ಉಡುಪಿ, ಅಭಿಯೋಜನಾ ಇಲಾಖೆ, ಆಯುಷ್, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳ ಸಹಯೋಗದೊಂದಿಗೆ ಈ ದಿನ ಗಿಡಮೂಲಿಕೆ ಮತ್ತು ಔಷಧೀಯ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಶಾಂತವೀರ ಶಿವಪ್ಪ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಔಷಧೀಯ ಹಾಗೂ ಯಾವುದೇ ಗಿಡಗಳಾಗಲಿ ಮನುಷ್ಯನಿಗೆ ಉಸಿರಾಡಲು ಒಳ್ಳೆಯ ಆಕ್ಸಿಜನ್ ನೀಡುತ್ತದೆ, ನಮ್ಮ ಆರೋಗ್ಯ ಚೆನ್ನಾಗಿರುತ್ತದೆ ಹೀಗಾಗಿ ಹಸಿರು ಬೆಳೆಸಿ ಉಳಿಸುವ ಪಣ ತೊಡೋಣ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ಶರ್ಮಿಳಾ.ಎಸ್, ಎಲ್ಲಾ ನ್ಯಾಯಾಧೀಶರು ಗಳು,
ಜಿಲ್ಲಾ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಶಾಂತಿಬಾಯಿ, ಉಪ ವಲಯ ಅರಣ್ಯಾಧಿಕಾರಿಗಳಾದ ಶ್ರೀ ಗುರುರಾಜ್, ತೋಟಗಾರಿಕೆ ಇಲಾಖೆಯ ಶ್ರೀಮತಿ ಭುವನೇಶ್ವರಿರವರು, ಆಯುಷ್ ಇಲಾಖೆಯ ಡಿ ಎ ಓ ಶ್ರೀ ಸತೀಶ್ ಆಚಾರ್ಯ,
ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಬಿ ನಾಗರಾಜ್ ಹಾಗೂ ಎಲ್ಲಾ ವಕೀಲರು, ನ್ಯಾಯಾಂಗ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!