ರೋಟರಿಯಲ್ಲಿ ಆರೋಗ್ಯ, ಶಿಕ್ಷಣ, ಮಾನವೀಯನೆಲೆಯ ಸಮಾಜಮುಖಿ ಸೇವಾಕಾರ್ಯಗಳು ನಿರಂತರ ~ಎಂ.ಜಿ.ರಾಮಚಂದ್ರಮೂರ್ತಿ

ಶಿರ್ವ:- ರೋಟರಿ ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಸಮಾನ ಮನಸ್ಕರ, ಸಮಾನ ಚಿಂತಕರ ಸೇವಾದರ್ಶ ತತ್ವಗಳನ್ನು ಮೈಗೂಡಿಸಿಕೊಂಡ ಆಸಕ್ತರ ಒಕ್ಕೂಟ. ರೋಟರಿ ಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಪರಿಸರ ಮಾನವೀಯ ನೆಲೆಯ ಸಮಾಜಮುಖಿ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತವೆ.
ಸರಕಾರ ಮಾಡುವ ಹಲವಾರು ಕಾರ್ಯಗಳನ್ನು ರೋಟರಿ ಸಂಸ್ಥೆಗಳು ನಿರಂತರವಾಗಿ ಮಾಡುತ್ತಿವೆ ಎಂದು ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3182 ಇದರ ಜಿಲ್ಲಾ ಗವರ್ನರ್ ಎಂ.ಜಿ.ರಾಮಚಂದ್ರಮೂರ್ತಿ ಶಿವಮೊಗ್ಗ ನುಡಿದರು.
 ಅವರು ಶುಕ್ರವಾರ 51 ವರ್ಷಗಳ ಸೇವಾ ಇತಿಹಾಸ ಹೊಂದಿರುವ ಪ್ರತಿಷ್ಠಿತ ಶಿರ್ವ ರೋಟರಿ ಸಂಸ್ಥೆಗೆ ಅಧಿಕೃತ ಸಂದರ್ಶನ ನೀಡಿ ದಿನಪೂರ್ತಿ ಹಲವಾರು ಸೇವಾ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿ ಸಂಜೆ ಬಂಟಕಲ್ಲು ರೋಟರಿ ಸಭಾಭವನದಲ್ಲಿ ಜರುಗಿದ ಸಾರ್ವಜನಿಕ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು,ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.
 ವಲಯ ಸಹಾಯಕ ಗವರ್ನರ್ ಡಾ.ಅರುಣ್ ಹೆಗ್ಡೆ ಕ್ಲಬ್ ಪತ್ರಿಕೆ “ಮಲ್ಲಿಕಾ” ಬಿಡುಗಡೆ ಗೊಳಿಸಿದರು. ಸಂಪಾದಕ ರಘುಪತಿ ಐತಾಳ್ ಸಹಕರಿಸಿದರು. ವಲಯಸೇನಾನಿ ಅನಿಲ್ ಡೇಸಾ ಶುಭ ಹಾರೈಸಿದರು.
ನಿವೃತ್ತ ಶಿಕ್ಷಕಿಯರಾದ ಹಿಲ್ಡಾ ಸಲ್ಡಾನ್ನಾ ಪಾಂಬೂರು, ಹಿಂದು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶಕಿಲಾ, ನಿಟ್ಟೆ ತಾಂತ್ರಿಕ ಕಾಲೇಜು ಉಪನ್ಯಾಸಕ, ಪಿಎಚ್‌ಡಿ ಸಾಧಕ ಡಾ.ಶ್ರೀರಾಮ್ ಪಿ. ಮರಾಠೆರವರನ್ನು ಸನ್ಮಾನಿಸ ಲಾಯಿತು. 
ಶಿರ್ವ ಸಂತಮೇರಿ ಕಾಲೇಜಿನ ಸಾಧಕ ಪ್ರೊ.ವಿಠಲ್ ನಾಯಕ್‌ರನ್ನು ಅಭಿನಂದಿಸ ಲಾಯಿತು. ಕೊರೋನಾ ವಾರಿಯರ್ಸ್ ಗಳಾಗಿ ಸೇವೆ ನೀಡುತ್ತಿರುವ ಗಿರಿಧರ್ ಪ್ರಭು ಶಿರ್ವ, ರಮೇಶ್ ಪೂಜಾರಿರವರನ್ನು ಗೌರವಿಸಲಾಯಿತು. ದಿನೇಶ್ ಕುಲಾಲ್, ಪ್ರಶೋಭ್ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ರಫಾಯಲ್ ಮತಾಯಸ್, ರೊನಾಲ್ಡ್ ಸಿಕ್ವೇರಾ, ಹೊನ್ನಯ್ಯ ಶೆಟ್ಟಿಗಾರ್, ಫಿಲಿಪ್ ಕಸ್ತಲಿನೊ, ಮೈಕಲ್ ಮತಾಯಸ್, ಅಮಿತ್ ಅರಾನ್ನ, ಜಗದೀಶ್ ಹೆಗ್ಡೆ, ವಿಷ್ಣುಮೂರ್ತಿ ಸರಳಾಯ, ಪರಿಚಯಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಜಯಕೃಷ್ಣ ಆಳ್ವ ವಹಿಸಿ ಸ್ವಾಗತಿಸಿದರು.
ಕಾರ್ಯದರ್ಶಿ ಜಿನೇಶ್ ಬಲ್ಲಾಳ್ ವರದಿ ವಾಚನ ಮಾಡಿ ಕೊನೆಯಲ್ಲಿ ಧನ್ಯವಾದ ವಿತ್ತರು. ಸುಧಾಕರ್ ಶೆಣೈ ನಿರೂಪಿಸಿದರು. ಕೋಡು ಸದಾನಂದ ಶೆಟ್ಟಿ, ರಾಘವೇಂದ್ರ ನಾಯಕ್ ಸಹಕರಿಸಿದರು.
ಪೂರ್ವಾಹ್ನ ಶಿರ್ವ ಹಿಂದೂ ಪ.ಪೂ.ಕಾಲೇಜು ಪ್ರೌಢಶಾಲೆಯಲ್ಲಿ ನೂತನ ಇಂಟರ‍್ಯಾಕ್ಟ್ ಕ್ಲಬ್ ಉದ್ಘಾಟನೆ, ಶಿರ್ವ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಸಮೀಪ ರಸ್ತೆ ಸೂಚನಾ ಫಲಕ ಅನಾವರಣ, ಶಿರ್ವ ಪೇಟೆ ಕಟಪಾಡಿ-ಕಾಪು ರಸ್ತೆ ಕೂಡುವಲ್ಲಿ ನೂತನ ಸರ್ಕಲ್ ಲೋಕರ್ಪಣೆ, ರೋಟರಿಯಿಂದ ನಿರ್ಮಾಣಗೊಂಡ ಎಲ್.ಮೆಂಡೋನ್ಸಾ ಸ್ಮಾರಕ ಬಸ್ ತಂಗುದಾಣ ಗ್ರಾಮಪಂಚಾಯತ್‌ಗೆ ಹಸ್ತಾಂತರ. 
ಶಿರ್ವ ಸಂತಮೇರಿ ಪ್ರೌಢ ಶಾಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ “ವಿದ್ಯಾಸೇತು” ಪುಸ್ತಕ ವಿತರಣೆ, ಪಾದೂರು ರೋಟರಿ ಸಮುದಾಯದಳದ ವತಿಯಿಂದ ರೈತರಿಗೆ ಸಾವಯವ ಗೊಬ್ಬರ ವಿತರಣೆ ಕೃಷಿ ಮಾಹಿತಿ, ಪಾದೂರು ಅಬ್ಬೆಟ್ಟುಗುತ್ತು ಡಾ.ಎನ್.ಎಸ್.ಶೆಟ್ಟಿ ನಿವಾಸದಲ್ಲಿ ಕ್ಲಬ್ ಎಸ್ಸೆಂಬ್ಲಿ, ಶಿರ್ವ ಗ್ಯಾಬ್ರಿಯಲ್ ನಜ್ರೆತ್ ನಿರ್ಮಿಸಿದ ಸಿದ್ಧಿವಿನಾಯಕ ದೇವಳ ಹಾಗೂ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳಕ್ಕೆ ಜಿಲ್ಲಾ ಗವರ್ನರ್ ಭೇಟಿ ಕಾರ್ಯಕ್ರಮಗಳು ಸಂಪನ್ನಗೊಂಡಿತು.  
 
 
 
 
 
 
 
 
 
 
 

Leave a Reply