ಎಸ್ ಐ ಓ ಉಡುಪಿ ಜಿಲ್ಲಾಧ್ಯಕ್ಷರಾಗಿ ಶೇಖ್ ಅಯಾನ್ ಮಲ್ಪೆ ಪುನರಾಯ್ಕೆ

ಉಡುಪಿ | ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್.ಐ.ಓ) ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಶೇಖ್ ಅಯಾನ್ ಅಯೂಬ್ ಮಲ್ಪೆ ಪುನರಾಯ್ಕೆಯಾಗಿದ್ದಾರೆ. ಉಡುಪಿಯ ವೈಕುಂಠ ಬಾಳಿಗ ಕಾನೂನು ಕಾಲೇಜಿನ ಕಾನೂನು ಪದವಿ ಅಧ್ಯಯನ ಮಾಡುತ್ತಿರುವ ಇರುವ ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ ಹೋರಾಟಗ ಮತ್ತು ವಿದ್ಯಾರ್ಥಿಗಳ ಧ್ವನಿಯಾಗಿ ತನ್ನನ್ನು ತೊಡಗಿಸಿಕೊಂಡಿದ್ದಾರೆ‌. 

ಈ ಸಂದರ್ಭದಲ್ಲಿ ಸಮೀರ್ ತೀರ್ಥಹಳ್ಳಿ ಉಡುಪಿ ಜಿಲ್ಲಾ ಕಾರ್ಯದರ್ಶಿಯಾಗಿ ಔಸಾಫ್ ಅಹ್ಸನ್ ಕ್ಯಾಂಪಸ್ ಕಾರ್ಯದರ್ಶಿಯಾಗಿಯೂ, ಮೊಹಮ್ಮದ್ ನಿಹಾಲ್ ಸಂಪನ್ಮೂಲ ಮತ್ತು ಮಾಧ್ಯಮ ಕಾರ್ಯದರ್ಶಿಯಾಗಿಯೂ ಹಾಗೂ ಮೊಹಮ್ಮದ್ ಅದ್ನಾನ್ ರವರನ್ನು ಜೊತೆ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply