ಟೈಲರ್ಸ ವೃತ್ತಿ ಬಾಂಧವರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ಉಡುಪಿ : ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಉಡುಪಿ ಜಿಲ್ಲೆ ಇವರ ವತಿಯಿಂದ ಕೋವಿಡ್ 19 ರ ‌ಸಂಕಷ್ಟದಲ್ಲಿರುವ ಟೈಲರ್ಸ ವೃತ್ತಿ ಬಾಂಧವರಿಗೆ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಣಾ ಕಾರ್ಯಕ್ರಮ ಭಾನುವಾರ ಉಡುಪಿ ಜಗನ್ನಾಥ ಸಭಾಭವನದಲ್ಲಿ ಟೈಲರ್ಸ ಎಸೋಸಿಯೇಷನ ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದಯಾನಂದ ಕೋಟ್ಯಾನ್ ಕೊರಂಗ್ರಪಾಡಿ, ಅಧ್ಯಕ್ಷತೆಯಲ್ಲಿ ನೆರವೇರಿತು.

ಸಹಕಾರಿ ಸಂಘಗಳ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿಶೇಷ ಆಹ್ವಾನಿತರಾಗಿ ಹಿರಿಯ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್, ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್ ,ಹಿರಿಯ ಉದ್ಯಮಿ ಹಿರೇಬೆಟ್ಟು ಪ್ರವೀಣ್ ಪೂಜಾರಿ, ಗೀತಾಂಜಲಿ ಸಿಲ್ಕ್ಸ್ ನ ಮಾಲಕರು ಹಾಗೂ ಟೈಲರ್ಸ ಎಸೋಸಿಯೇಷನ್ ಕ್ಷೇತ್ರ ಸಮಿತಿ ಉಡುಪಿಯ ಮಾಜಿ ಅಧ್ಯಕ್ಷ ರಾಮಕೃಷ್ಣ ನಾಯಕ್, ‌ಜಿಲ್ಲಾ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಬಿ.ಸೋನ್ಸ್ ,ರಾಜ್ಯ ಸಮಿಯ ಕೋಶಾಧಿಕಾರಿ ಅಬ್ದುಲ್ ಖಾದರ್, ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ರಾಮಚಂದ್ರ , ಕ್ಷೇತ್ರ ಸಮಿತಿ ಯ ಉಪಾಧ್ಯಕ್ಷೆ ಮೀನಾಕ್ಷಿ ಆಚಾರ್ಯ, ಉಪಸ್ಥಿತರಿದ್ದರು.ಉಡುಪಿ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ದಯಾನಂದ ಪ್ರಭು ಹಿರಿಯಡಕ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

 
 
 
 
 
 
 
 
 
 
 

Leave a Reply