ಉಡುಪಿ : ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನ ಸಭೆ

ಉಡುಪಿ ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಶಾಸಕ ಯಶ್ ಪಾಲ್ ಎ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ , ಗುರುರಾಜ್ ಶೆಟ್ಟಿ ಗಂಟಿಹೊಳೆ , ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ ರಂದೀಪ್, ಆರೋಗ್ಯ ಇಲಾಖೆಯ ನಿರ್ದೇಶಕಿ ಪುಷ್ಪಲತಾ ಬಿ. ಎಸ್, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply