Janardhan Kodavoor/ Team KaravaliXpress
28.6 C
Udupi
Sunday, August 1, 2021

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ , ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2021-23ನೆ ಸಾಲಿನ ನೂತನ ಅಧ್ಯಕ್ಷರಾಗಿ ನಮ್ಮ ಟಿವಿ ವಾಹಿನಿಯ ರಾಜೇಶ್ ಶೆಟ್ಟಿ ಅಲೆವೂರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ನಝೀರ್ ಪೊಲ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ಅಜ್ಜರಕಾಡಿನ ಐಎಂಎ ಭವನದಲ್ಲಿ ಫೆ.16ರಂದು ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ಪಕ್ರಿಯೆ ನಡೆಸಲಾಯಿತು.ಉಪಾಧ್ಯಕ್ಷರಾಗಿ ವಿನಯ ಪಾಯಸ್ ಕುಂದಾಪುರ, ಬಾಲಕೃಷ್ಣ ಪೂಜಾರಿ ಕಾಪು, ಆರ್ ಬಿ ಜಗದೀಶ್ ಕಾರ್ಕಳ, ಸಹಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ ಬ್ರಹ್ಮಾವರ, ಕೋಶಾಧಿಕಾರಿಯಾಗಿ ಉಮೇಶ್ ಮಾರ್ಪಳ್ಳಿ, ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್ ಎರ್ಮಾಳ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ್ ಸಾಯ್ಬರ್ ಕಟ್ಟೆ, ಪ್ರಮೋದ್ ಸುವರ್ಣ, ಸಂತೋಶ್ ನಾಯ್ಕ್, ಉದಯ್ ಕುಮಾರ್ ತಲ್ಲೂರು, ಹರ್ಶಿಣಿ ಬ್ರಹ್ಮಾವರ, ಹರಿಪ್ರಸಾದ್ ನಂದಳಿಕೆ, ಸಂಜೀವ ಆರ್ಡಿ ಆಯ್ಕೆಯಾದರು.ಚುನಾವಣಾ ಪ್ರಕ್ರಿಯೆಯನ್ನು ವಾರ್ತಾಧಿಕಾರಿ ಮಂಜುನಾಥ್ ನಡೆಸಿಕೊಟ್ಟರು. ನಿರ್ಗಮನ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮನ ಪ್ರಧಾನ ಕಾರ್ಯದರ್ಶಿ ಸಂತೋಷ್ ನಾಯಕ್ ವರದಿ ವಾಚಿಸಿದರು. ನಿರ್ಗಮನ ಕೋಶಾಧಿಕಾರಿ ದಿವಾಕರ ಭಂಡಾರಿ ಲೆಕ್ಕಪತ್ರ ಮಂಡಿಸಿ, ರಾಕೇಶ್ ಕುಂಜೂರು ಕಾರ್ಯ ಕ್ರಮ ನಿರೂಪಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಸುಪ್ರಭಾತ

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!