ಮಾರ್ಚ್ 9ರಂದು ಮಾಸಿಕ “ಉನ್ನತಿ ಉದ್ಯೋಗ ಮೇಳ”ದಲ್ಲಿ 25ಕ್ಕೂ ಹೆಚ್ಚಿನ ಕಂಪೆನಿಗಳು, ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳು ನೋಂದಣಿ

ಕೌಶಲ್ಯ ಶಿಕ್ಷಣಕ್ಕೆ ಸುಪ್ರಸಿದ್ಧ ಹಾಗೂ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು ಸಂಚಲನ ಸ್ವಯಂ ಸೇವಾ ಸಂಸ್ಥೆಯ ಸಹಕಾರದೊಂದಿಗೆ “ರಾಷ್ಟ್ರೀಯ ಯುವ ದಿವಸ”ದ ಅಂಗವಾಗಿ ಪ್ರಾರಂಭಿಸಿರುವ ಜನವರಿ 2023ರಿಂದ ಜನವರಿ 2024 ರವರೆಗಿನ ಮಾಸಿಕ ಉಚಿತ ‘ಉನ್ನತಿ ಉದ್ಯೋಗ ಮೇಳ’ದ 3ನೇ ಮೇಳವು ಇದೇ ಮಾರ್ಚ್ 9ರಂದು ಪಿಪಿಸಿ 1ನೇ ಅಡ್ಡ ರಸ್ತೆಯಲ್ಲಿರುವ ಸಂಸ್ಥೆಯ ಕ್ಯಾಂಪಸ್ ನಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 1.30ರ ತನಕ ನಡೆಯಲಿದೆ. ಈ ಮೇಳದಲ್ಲಿ ಭಾಗವಹಿಸಲು ಈಗಾಗಲೇ 25ಕ್ಕೂ ಹೆಚ್ಚಿನ ಕಂಪೆನಿಗಳು ಹಾಗೂ 1000ಕ್ಕೂ ಹೆಚ್ಚಿನ ಅಭ್ಯರ್ಥಿಗಳು www.unnathijobs.com ವೆಬ್ ಸೈಟ್ ಮೂಲಕ ನೋಂದಣಿ ಮಾಡಿದ್ದು, ನೇರ ಮತ್ತು ಆನ್ ಲೈನ್ ಮೂಲಕ ಸಂದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಭಾಗವಹಿಸುವ ಅಭ್ಯರ್ಥಿಗಳಿಗೆ ಮಾರ್ಚ್8ರಂದು ಸಂಜೆ 4-5 ಗಂಟೆ ಸಮಯ ಸಂದರ್ಶನ ಎದುರಿಸುವ ಬಗ್ಗೆ ಉಚಿತ ತರಬೇತಿಯನ್ನೂ ಆಯೋಜಿಸಿದ್ದೇವೆ. ಈಗಾಗಲೇ ಯಶಸ್ವಿಯಾಗಿ 2 ಮೇಳಗಳನ್ನು ಪೂರೈಸಿದ್ದು, ಮಾರ್ಚ್ ತಿಂಗಳ ಮೇಳದಲ್ಲಿ ಹೆಚ್ಚಿನ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗ ಗಿಟ್ಟಿಸಿಕೊಳ್ಳುವಂತೆ ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply