ವಿಶ್ವ ಹಿಂದೂ ಪರಿಷದ್ ಭಜರಂಗದಳ ಕೊಡಿಬೆಟ್ಟು ಪೆರ್ಣಂಕಿಲ ನೇತೃತ್ವದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ : ವಿಶ್ವ ಹಿಂದೂ ಪರಿಷದ್ ಭಜರಂಗದಳ ಕೊಡಿಬೆಟ್ಟು ಪೆರ್ಣಂಕಿಲ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ವಿಶ್ವ ಹಿಂದೂ ಪರಿಷದ್ ಪ್ರಮುಖ ದಿನೇಶ್ ಮೆಂಡನ್, ಅಂಜಾರು ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಶೆಟ್ಟಿ, ಉದ್ಯಮಿ ಕೃಷ್ಣ ಕುಲಾಲ್, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply