ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ

ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ೦೯.೦೩.೨೦೨೪ ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿತು.

ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ ಮತ್ತು ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

ಸಮಾಲೋಚನಾ ಸಭೆಯ ಸಂಪನ್ಮೂಲ ವ್ಯಕ್ತಿಗಳಾಗಿ ಅದಮಾರು ಎಜುಕೇಶನಲ್ ಕೌನ್ಸೆಲ್‌ನ ಆಡಳಿತ ಅಧಿಕಾರಿಯಾದ ಡಾ. ಎ. ಪಿ. ಭಟ್, ಸಂಸ್ಥೆಯ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್, ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಗೋಪಾಲಕೃಷ್ಣ ಭಟ್, ಉಪನ್ಯಾಸಕರೂ, ಕಲಾವಿದರೂ ಆದ ಶ್ರುತಕೀರ್ತಿ ರಾಜ್ ಭಾಗವಹಿಸಿದ್ದರು. ಸಂಸ್ಥೆಯ ದಾನಿ ಯು. ಎಸ್. ರಾಜಗೋಪಾಲ ಆಚಾರ್ಯ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾರ್ಗದರ್ಶಿ ಮಾತುಗಳನ್ನಾಡಿದರು. ವಿದ್ಯಾಪೋಷಕ್ ಫಲಾನುಭವಿ, ಪ್ರಸ್ತುತ ಉದ್ಯೋಗದಲ್ಲಿರುವ ಪ್ರಜ್ವಲ್ ಶೆಟ್ಟಿ ಮತ್ತು ಸಿಎ ವಿದ್ಯಾರ್ಥಿನಿ ಕವನಾ ತಮ್ಮ ಅನುಭವಗಳನ್ನು ಹಂಚಿಕೊoಡರು. ಇದೇ ಸಂದರ್ಭದಲ್ಲಿ ಸಂಸ್ಥೆಯ ದಾನಿಗಳಾದ ಎ. ಮುರಾರಿ ರಾವ್–ಚಂದ್ರಕಲಾ ದಂಪತಿಗಳು ನೀಡಿದ ಲ್ಯಾಪ್‌ಟಾಪ್‌ನ್ನು ವಿದ್ಯಾಪೋಷಕ್ ಇಂಜಿನೀಯರಿoಗ್ ವಿದ್ಯಾರ್ಥಿನಿ ಅಖಿಲಾಳಿಗೆ ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿಯವರು ಹಸ್ತಾಂತರಿಸಿದರು. ೨೩೦ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಶಿಬಿರದಲ್ಲಿ ಕಾರ್ಯದರ್ಶಿ ಮುರಲಿ ಕಡೆಕಾರ್ ಅಗತ್ಯ ಸೂಚನೆಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ್, ಅಶೋಕ್ಎಂ, ಗಣೇಶ್ ರಾವ್ ಎಲ್ಲೂರು ಸಹಕರಿಸಿದರು.

 
 
 
 
 
 
 
 
 
 
 

Leave a Reply