ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣ ಸಮಾರಂಭ

ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸoಸ್ಥೆಯಾದ ವಿದ್ಯಾಪೋಷಕ್ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ೧೮ ವರ್ಷಗಳಿಂದ ಆರ್ಥಿಕ ನೆರವು ನೀಡುತ್ತಿದ್ದು, ಈ ವರ್ಷದ ವಿನಮ್ರ ಸಹಾಯಧನ ವಿತರಣಾ ಸಮಾರಂಭವು ಕುoದಾಪುರದ ಬಂಟರ ಯಾನೆ ನಾಡವರ ಸಂಘದ ಸಹಕಾರದೊoದಿಗೆ ಅಕ್ಟೋಬರ್ ೧, ೨೦೨೩ ಭಾನುವಾರ ಕುಂದಾಪುರದ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಜರಗಲಿದೆ.

ಶ್ರೀ ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಪೂರ್ವಾಹ್ನ ೧೦.೦೦ ಗಂಟೆಗೆ ಸಮಾರಂಭ ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಶ್ರೀ ಜಯಪ್ರಕಾಶ್ ಹೆಗ್ಡೆ ವಹಿಸಲಿದ್ದಾರೆ. ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್, ಆನೆಗುಡ್ಡೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಶ್ರೀರಮಣ ಉಪಾಧ್ಯ ಇವರ ಗೌರವ ಉಪಸ್ಥಿತಿಯಲ್ಲಿ ಹಾಗೂ ಅತಿಥಿಗಣ್ಯರ ಸಮಕ್ಷ ಜರಗಲಿರುವ ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ ಸಹುಪಕುಲಾಧಿಪತಿಗಳಾದ ಡಾ. ಶರತ್ ರಾವ್ ಶುಭಾಶಂಸನೆಗೈಯಲಿದ್ದಾರೆ.

ಅಪರಾಹ್ನ ೨.೩೦ ಗಂಟೆಗೆ ನಾಡೋಜ ಡಾ. ಜಿ. ಶಂಕರ್ ಇವರ ಅಧ್ಯಕ್ಷತೆಯಲ್ಲಿ ವಿನಮ್ರ ಸಹಾಯ ವಿತರಣಾ ಸಮಾರಂಭ ಜರಗಲಿದೆ. ಉಡುಪಿ, ಕಾಪು, ಕುಂದಾಪುರ ಹಾಗೂ ಬೈಂದೂರು ಶಾಸಕರ ಗೌರವ ಉಪಸ್ಥಿತಿಯಲ್ಲಿ ಅತಿಥಿ ಗಣ್ಯರ ಸಮಕ್ಷ ನಡೆಯುವ ಪ್ರಧಾನ ಕಾರ್ಯಕ್ರಮದಲ್ಲಿ ಪ್ರೇರಣಾ ಇನ್ಫೋಸಿಸ್ ಸಂಸ್ಥೆಯ ವಿಶ್ವಸ್ಥರಾದ ಶ್ರೀ ವಾಸುದೇವ ಕಾಮತ್ ರವರು ಆರು ಮಂದಿ
ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಿದ್ದಾರೆ.
ಒಟ್ಟು ೧೧೧೫ ವಿದ್ಯಾರ್ಥಿಗಳಿಗೆ ರೂಪಾಯಿ ೯೫,೫೮,೦೦೦/- ವಿತರಣೆಯಾಗಲಿದೆ
ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply